BREAKING: ದೆಹಲಿಯಲ್ಲಿ ಕಾರು ಸ್ಪೋಟದ ಬೆನ್ನಲ್ಲೇ ಕರ್ನಾಟಕದಲ್ಲೂ ಕಟ್ಟೆಚ್ಚರ: ಹೈಅಲರ್ಟ್ ಘೋಷಣೆ
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರು ಸ್ಪೋಟದಿಂದಾಗಿ 9 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲೂ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು, ಜಿಲ್ಲಾ ಕೇಂದ್ರಗಳಲ್ಲಿ ಹೈಅಲರ್ಟ್ ನೀಡಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ ಸಲೀಂ ಆದೇಶ ಹೊರಡಿಸಿದ್ದಾರೆ. ಏರ್ ಪೋರ್ಟ್, ಬಂದರು, ರೈಲು ನಿಲ್ದಾಣ, ಬಸ್ ನಿಲ್ದಾಣಗಳು, ಮಾರ್ಕೆಟ್ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಬಂದೋಬಸ್ತ್ ಕೈಗೊಳ್ಳಲು ಸೂಚಿಸಿದ್ದಾರೆ. ಜಿಲ್ಲೆಗಳಲ್ಲಿ ನಿಗಾ ವಹಿಸುವಂತೆ ಎಸ್ ಪಿ ಗಳಿಗೆ ಡಿಜಿ ಮತ್ತು ಐಜಿಪಿ ಆದೇಶದಲ್ಲಿ ಸೂಚಿಸಿದ್ದಾರೆ.
Copy and paste this URL into your WordPress site to embed
Copy and paste this code into your site to embed