ಬೆಂಗಳೂರು : ಇಂದು ಸಿಲಿಕಾನ್ ಸಿಟಿಯಲ್ಲಿ ಹಲವೆಡೆ ಸಾಮೂಹಿಕ ಗಣೇಶೋತ್ಸವ ವಿಸರ್ಜನೆ ಹಿನ್ನೆಲೆ ನಗರದಾದ್ಯಂತ ಪೊಲೀಸರಿಂದ ಹೈಅಲರ್ಟ್ ಘೋಷಣೆ ಮಾಡಲಾಗಿದೆ.
ನಗರದ ಕೆಲ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಳಲಾಗಿದೆ. ವಾಹನ ಸವಾರರಿಗೆ ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 10ರವರೆಗೆ ನಿರ್ಬಂಧ ವಿಧಿಸಲಾಗಿದೆ.