BREAKING: ರಾಜ್ಯ ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ತೀರ್ಮಾನ: ಸಿಎಂ ಸಿದ್ಧರಾಮಯ್ಯ ಘೋಷಣೆ

ನವದೆಹಲಿ: ರಾಜ್ಯ ಸಂಪುಟ ಪುನಾರಚನೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದೆ. ಹೀಗಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಳಿಯಲ್ಲಿ ಚರ್ಚೆ ಮಾಡುವುದಕ್ಕೆ ತೆರಳುತ್ತಿರುವುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಈ ಮೂಲಕ ರಾಜ್ಯ ಸಂಪುಟ ಪುನಾರಚನೆ ಫಿಕ್ಸ್ ಎಂಬುದಾಗಿ ಘೋಷಿಸಿದ್ದಾರೆ. ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಗೂ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಿದೆ. ಹೀಗಾಗಿ ಖರ್ಗೆ ಜೊತೆ ಮಾತನಾಡಲು ಹೋಗುತ್ತಿದ್ದೇನೆ ಎಂದರು. ನಾಲ್ಕೈದು ತಿಂಗಳ ಹಿಂದೆಯೇ ಸಂಪುಟ ಪುನಾರಚನೆಗೆ ಹೇಳಿದ್ದರು. … Continue reading BREAKING: ರಾಜ್ಯ ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ತೀರ್ಮಾನ: ಸಿಎಂ ಸಿದ್ಧರಾಮಯ್ಯ ಘೋಷಣೆ