ಬೆಂಗಳೂರು: ಬಿಜೆಪಿ ಪಕ್ಷದಿಂದ ದೂರವಾಗಿ, ಸ್ವಂತ ಪಕ್ಷ ಕಟ್ಟಿ ಆ ಪಕ್ಷದಿಂದಲೇ ಗೆಲುವು ಸಾಧಿಸಿದ್ದಂತ ಮಾಜಿ ಸಚಿವ ಜನಾರ್ಧನರೆಡ್ಡಿ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿರೋದಾಗಿ ತಿಳಿದು ಬಂದಿದೆ. ಹೀಗಾಗಿ ಜನಾರ್ಧನ ರೆಡ್ಡಿ ಶೀಘ್ರವೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ.
ಕೆ ಆರ್ ಪಿಪಿ ಪಕ್ಷವನ್ನು ಸ್ಥಾಪಿಸಿ ವಿಧಾನಸಭಾ ಚುನಾವಣೆಯ ವೇಳೆಯಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕೆ ಇಳಿದು, ಜನಾರ್ಧನ ರೆಡ್ಡಿ ಕಣಕ್ಕೆ ಇಳಿಸಿದ್ದರು. ಗೆಲುವು ಕೂಡ ಸಾಧಿಸಿದ್ದರು. ಇಂತಹ ಅವರು ಲೋಕಸಭಾ ಚುನಾವಣೆಯ ಹೊತ್ತಲ್ಲೇ ಬಿಜೆಪಿ ಸೇರ್ಪಡೆಗೆ ತಯಾರಿ ನಡೆಸಲಾಗಿತ್ತು.
ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿದ್ದಂತ ಜನಾರ್ಧನ ರೆಡ್ಡಿ ಅವರು, ಅಂತಿಮ ಸುತ್ತಿನ ಮಾತುಕತೆಯನ್ನು ನಡೆಸಿದ್ದರು. ಈ ಬಳಿಕ ಜನಾರ್ಧನ ರೆಡ್ಡಿ ಬಿಜೆಪಿ ಸೇರ್ಪಡೆಗೆ ಹಸಿರು ನಿಶಾನೆಯನ್ನು ತೋರಿರೋದಾಗಿ ತಿಳಿದು ಬಂದಿದೆ.
ಇನ್ನೂ ಮಾರ್ಚ್.25ರ ನಾಳೆ ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಶಾಸಕ ಜನಾರ್ಧನ ರೆಡ್ಡಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಕಾದು ನೋಡಬೇಕಿದೆ.
BREAKING: ‘ಚಂದ್ರಯಾನ-3’ ಲ್ಯಾಂಡಿಂಗ್ ಸೈಟ್ ಹೆಸರು ‘ಶಿವ ಶಕ್ತಿ’ಗೆ ‘IAU ಅನುಮೋದನೆ’
ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ನವೋದಯ ವಿದ್ಯಾಲಯದಲ್ಲಿ 1377 ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ