ಬೆಂಗಳೂರು : ಇತ್ತೀಚಿಗೆ ಸಹಕಾರ ಸಚಿವ ಕೆ ಎನ್ ರಾಜಣ್ಣ ಮೂರು ಸಮುದಾಯಗಳ ನಾಯಕರನ್ನು ಹೆಚ್ಚುವರಿ ಡಿಸಿಎಂ ಹುದ್ದೆಗೆ ನೇಮಕ ಮಾಡಬೇಕು ಎಂದು ಹೇಳಿಕೆ ನೀಡಿರುವ ವಿಚಾರ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿತ್ತು. ಈಗ ಈ ವಿಚಾರಕ್ಕೆ ಪುಷ್ಟಿ ನೀಡುವಂತೆ ರಾಜ್ಯ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲ, ಈ ವಿಷಯದ ಕುರಿತು ಚರ್ಚಿಸಿದ್ದಾರೆ ಎಂದು ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರ ಜೊತೆ ಕಾಂಗ್ರೆಸ್ ಉಸ್ತುವಾರಿ ಸುರಜೆವಾಲ ಚರ್ಚೆ ವಿಚಾರ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಚರ್ಚೆಯಾಗಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದು, ಎಷ್ಟು ಸಮುದಾಯಗಳಿಗೆ ಕೊಡಬೇಕು ಅಂತ ಚರ್ಚೆ ಮಾಡಿಲ್ಲ ಎಂದು ಬೆಂಗಳೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.
ರಾಹುಲ್ ಗಾಂಧಿ ವೇಣುಗೋಪಾಲ್ ಗಮನಕ್ಕೆ ತರುವುದಾಗಿ ತಿಳಿಸಿದ್ದಾರೆ. ಹೆಚ್ಚುವರಿ ಡಿಸಿಎಂ ಸೃಷ್ಟಿಯಾದರೂ ಡಿಕೆಶಿ ಡಿಸಿಎಂ ಆಗಿರುತ್ತಾರೆ.ಅದು ಅವರ ಹುದ್ದೆ ನಾವು ನಮ್ಮ ಬೇಡಿಕೆಯನ್ನು ಹೇಳಿದ್ದೇವೆ.ಪಕ್ಷದ ಹೈಕಮಾಂಡ್ ಈ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತದೆ. ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಬಗ್ಗೆಯೂ ಕೂಡ ಚರ್ಚೆ ಮಾಡಿದ್ದೇವೆ. ಜನವರಿ 11ರಂದು ದೆಹಲಿಯಲ್ಲಿ ಸಭೆ ನಿಗದಿಯಾಗಿದ್ದೆ ಹೋಗುತ್ತೇನೆ ಎಂದು ತಿಳಿಸಿದರು.
ಎಷ್ಟು ಡಿಸಿಎಂ ಯಾರಿಗೆ ಅಂತ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಅಭಿಪ್ರಾಯವನ್ನು ವರಿಷ್ಠರಿಗೆ ತಿಳಿಸುತ್ತೇವೆ ಅಂತ ಸುರ್ಜೆವಾಲ ಹೇಳಿದ್ದಾರೆ.ಅದೇ ರೀತಿಯಾಗಿ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕ ಕುರಿತಂತೆಯೂ ಕೂಡ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಜೊತೆ ಚರ್ಚಿಸಲಿದ್ದಾರೆ.