ಜನಸಂದಣಿ ನಿಯಂತ್ರಣ ಮಸೂದೆ ಜಾರಿಯಾಗುವವರೆಗೆ ‘SOP’ ಪಾಲಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

​ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಕ್ರೀಡಾಕೂಟಗಳ ವೇಳೆ ಜನಸಂದಣಿಯನ್ನು ನಿಯಂತ್ರಿಸಲು ಉದ್ದೇಶಿತ ‘ಕರ್ನಾಟಕ ಜನಸಂದಣಿ ನಿಯಂತ್ರಣ ಮಸೂದೆ-2025’ ಅಧಿಕೃತವಾಗಿ ಕಾಯಿದೆಯಾಗಿ ಜಾರಿಯಾಗುವವರೆಗೆ, ಸರ್ಕಾರ ರೂಪಿಸಿರುವ ಪ್ರಮಾಣಿತ ಕಾರ್ಯವಿಧಾನವನ್ನು (SOP) ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿದೆ. 2025ರ ಜೂನ್‌ನಲ್ಲಿ ಆರ್‌ಸಿಬಿ ತಂಡದ ವಿಜಯೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ … Continue reading ಜನಸಂದಣಿ ನಿಯಂತ್ರಣ ಮಸೂದೆ ಜಾರಿಯಾಗುವವರೆಗೆ ‘SOP’ ಪಾಲಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ