ಬೆಂಗಳೂರು: ಕರ್ನಾಟಕದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣದಲ್ಲಿ ಎಂಎಲ್ಸಿ ರವಿಕುಮಾರ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಜುಲೈ.8ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚಿಸಿದೆ.
ಇಂದು ಸಿಎಸ್ ಶಾಲಿನಿ ರಜನೀಶ್ ವಿರುದ್ಧದ ಅವಹೇಳನಕಾರಿ ಪ್ರಕರಣ ಸಂಬಂಧ ಹೈಕೋರ್ಟ್ ಗೆ ಪ್ರಕರಣ ರದ್ದುಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ನ್ಯಾಯಪೀಠವು ನಡೆಸಿತು. ವಾದ ಪ್ರತಿವಾದವನ್ನು ಆಲಿಸಿದಂತ ನ್ಯಾಯಾಲಯವು ಜುಲೈ.8ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶಿಸಿದೆ.
ಇನ್ನೂ ಸಿಎಸ್ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣದ ತನಿಖೆಗೆ ಸಹಕರಿಸುವಂತೆ ಹೈಕೋರ್ಟ್ ವಿಧಾನ ಪರಿಷತ್ ಸದಸ್ಯ ಎನ್ ರವಿ ಕುಮಾರ್ ಗೆ ಸೂಚಿಸಿದೆ. ಈ ಮೂಲಕ ಹೈಕೋರ್ಟ್ ರವಿಕುಮಾರ್ ಗೆ ಬಿಗ್ ರಿಲೀಫ್ ನೀಡಿದೆ.
ರಾಜ್ಯದ ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಶೀಘ್ರವೇ ಟಿಕೆಟ್ ದರದ ‘ರೌಂಡಪ್ ವ್ಯವಸ್ಥೆ’ ರದ್ದು
BREAKING: CUET UG 2025 ಫಲಿತಾಂಶ ಪ್ರಕಟ: ಈ ರೀತಿ ರಿಸಲ್ಟ್ ಚೆಕ್ ಮಾಡಿ | CUET UG Result 2025