ಬೆಂಗಳೂರು: ಶಾಸಕ ಸತೀಶ್ ಸೈಲ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅಕ್ರಮ ಅದಿರು ರಪ್ತು ಕೇಸಲ್ಲಿ ಜಾರಿ ನಿರ್ದೇಶನಾಲಯ ದಾಖಲಿಸಿದ್ದಂತ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಶಾಸಕ ಸತೀಶ್ ಸೈಲ್ ಅವರು ಅಕ್ರಮ ಅದಿರು ರಪ್ತು ಪ್ರಕರಣದಲ್ಲಿ ಅನಾರೋಗ್ಯದ ಕಾರಣ ನೀಡಿ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿತು. ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದಂತ ನ್ಯಾಯಪೀಠವು, ಲಿವರ್ ಸಮಸ್ಯೆಯಿರುವ ಕಾರಣ ಚಿಕಿತ್ಸೆಗೆ ಅಗತ್ಯತೆಯ ಕಾರಣ ನೀಡಿ, ವೈದ್ಯಕೀಯ ಆಧಾರದ ಮೇಲೆ ಜಾಮೀನು ಮಂಜೂರು ಮಾಡಿದೆ.
ಇನ್ನೂ ಜಾಮೀನು ಮಂಜೂರು ವೇಳೆಯಲ್ಲಿ ಕೆಲ ಷರತ್ತುಗಳನ್ನು ವಿಧಿಸಿದೆ. 5 ಲಕ್ಷದ ಮೌಲ್ಯದ ಬಾಂಡ್ ಹಾಗೂ ಒಬ್ಬರ ಶ್ಯೂರಿಟಿ ಒದಗಿಸುವಂತೆ ಶಾಸಕ ಸತೀಶ್ ಸೈಲ್ ಗೆ ಹೈಕೋರ್ಟ್ ತಿಳಿಸಿದೆ.








