ವರ್ಷದ ಪ್ರಾರಂಭದಿಂದ್ಲು ಸಿಗ್ತಿಲ್ಲ ʼವೃದ್ಧಾಪ್ಯ ವೇತನʼ: ಕೇಂದ್ರ, ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿ..! – Kannada News Now


State

ವರ್ಷದ ಪ್ರಾರಂಭದಿಂದ್ಲು ಸಿಗ್ತಿಲ್ಲ ʼವೃದ್ಧಾಪ್ಯ ವೇತನʼ: ಕೇಂದ್ರ, ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿ..!

ಬೆಂಗಳೂರು: ಈ ವರ್ಷದ ಜನವರಿಯಿಂದ ಸಂಧ್ಯಾ ಸುರಕ್ಷಾ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ ಯೋಜನೆಯಡಿ ಹಿರಿಯ ನಾಗರಿಕರಿಗೆ ಪಿಂಚಣಿ ಸಿಗುತ್ತಿಲ್ಲ. ಈ ಕುರಿತು ಹೈಕೋರ್ಟ್‌ ಸಲ್ಲಿಸಿರುವ ಅರ್ಜಿ ಸಂಬಂಧ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.

ಅಖಿಲ ಕರ್ನಾಟಕ ವಯೋವೃದ್ಧರ ಒಕ್ಕೂಟ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕಾ ನೇತೃತ್ವದ ವಿಭಾಗೀಯ ಪೀಠ, ʼಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಪಿಂಚಣಿ ಮತ್ತು ಸಾಮಾಜಿಕ ಭದ್ರತೆ ನಿರ್ದೇಶನಾಲಯ ಸೇರಿದಂತೆ ಇತರ ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿದೆ. ಇನ್ನು ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ನ.17ಕ್ಕೆ ಮುಂದೂಡಿದೆ.

 




error: Content is protected !!