ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದಂತ ಕೆ ಎಸ್ ಸಿ ಎ ಅಧ್ಯಕ್ಷೀಯ ಚುನಾವಣೆ ಸ್ಪರ್ಧೆಯಲ್ಲಿ ಕೆಎನ್ ಶಾಂತಾಕುಮಾರ್ ಅವರ ನಾಮಪತ್ರ ತಿರಸ್ಕೃತಗೊಂಡ ಹಿನ್ನಲೆಯಲ್ಲಿ ಅವಿರೋಧವಾಗಿ ವೆಂಕಟೇಶ್ ಪ್ರಸಾದ್ ಆಯ್ಕೆಯಾಗಿದ್ದರು. ಇದನ್ನು ಪ್ರಶ್ನಿಸಿ ಶಾಂತಾಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ನಾಳೆಯವರೆಗೆ ಕೆ ಎಸ್ ಸಿ ಎ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸದಂತೆ ಆದೇಶಿಸಿದೆ.
ಕೆ ಎಸ್ ಸಿ ಎ ಅಧ್ಯಕ್ಷ ಚುನಾವಣೆಯಲ್ಲಿ ನಾಮಪತ್ರ ತಿರಸ್ಕೃತಗೊಂಡಿದ್ದನ್ನು ಪ್ರಶ್ನಿಸಿ ಅಭ್ಯರ್ಥಿ ಕೆ.ಎನ್ ಶಾಂತಾಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯಲ್ಲಿ ಚುನಾವಣಾಧಿಕಾರಿ ಆದೇಶ ರದ್ದುಪಡಿಸುವಂತೆ ಕೋರಿದ್ದರು.
ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠವು ನಾಳೆಯವರೆಗೆ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸದಂತೆ ಸೂಚಿಸಿದೆ. ಇದಲ್ಲದೇ ನಾಮಪತ್ರ ಪರಿಶೀಲನೆ ವೇಳೆಗೆ ಚಂದಾ ಹಣ ಪಾವತಿಸಲಾಗಿತ್ತೇ? ಇದರ ಮಾಹಿತಿಯನ್ನು ಚುನಾವಣಾಧಿಕಾರಿಗಳಿಗಿತ್ತೇ ತಿಳಿಸಬೇಕು ಎಂದು ಹೇಳಿ ನಾಳೆಗೆ ವಿಚಾರಣೆ ಮುಂದೂಡಿಕೆ ಮಾಡಿದೆ.
ಪ್ರತಿವಾದಿ ಬಿಕೆ ವೆಂಕಟೇಶ್ ಪ್ರಸಾದ್, ಕೆ ಎಸ್ ಸಿ ಎ ಚುನಾವಣಾಧಿಕಾರಿ ಕಲ್ಪನಾ ವೆಂಕಟಾಚಾರ್ ಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
BIG NEWS : ರಾಜ್ಯದಲ್ಲಿ ಅವಕಾಶ ಸಿಕ್ಕರೆ ದಲಿತರನ್ನು ‘CM’ ಮಾಡುತ್ತೇವೆ : ಸಚಿವ ಕೆಜೆ ಜಾರ್ಜ್ ಹೇಳಿಕೆ








