Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜೂನ್ 10ರಂದು ಭಾರತದ ಅತಿ ದೀರ್ಘಕಾಲದ ಚುನಾಯಿತ ಪ್ರಧಾನಿಯಾಗಿ ಮೋದಿ ದಾಖಲೆ | PM Modi

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

ಉಡುಪಿ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧದ FIR ರದ್ದುಗೊಳಿಸಿದ ಹೈಕೋರ್ಟ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉಡುಪಿ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧದ FIR ರದ್ದುಗೊಳಿಸಿದ ಹೈಕೋರ್ಟ್
KARNATAKA

ಉಡುಪಿ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧದ FIR ರದ್ದುಗೊಳಿಸಿದ ಹೈಕೋರ್ಟ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿ ದಹನ ಹಾಗೂ ಕಾನೂನುಬಾಹಿರ ಪ್ರತಿಭಟನೆ ನಡೆಸಿದ ಆರೋಪ ಎದುರಿಸುತ್ತಿದ್ದ ಉಡುಪಿ ಕ್ಷೇತ್ರದ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ಅವರಿಗೆ ಕರ್ನಾಟಕ ಹೈಕೋರ್ಟ್ ದೊಡ್ಡ ರಿಲೀಫ್ ನೀಡಿದೆ. ಶಾಸಕರು ಸೇರಿದಂತೆ ಇತರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ (FIR) ಅನ್ನು ನ್ಯಾಯಾಲಯ ರದ್ದುಗೊಳಿಸಿದೆ.

ಪ್ರಕರಣದ ಹಿನ್ನೆಲೆ ಏನು?

ಕುಂದಾಪುರದ ಶಾಲೆಯೊಂದರ ಪ್ರಾಂಶುಪಾಲರಿಗೆ ರಾಜ್ಯ ಪ್ರಶಸ್ತಿ ತಡೆಹಿಡಿದಿರುವುದನ್ನು ವಿರೋಧಿಸಿ 2024ರ ಸೆಪ್ಟೆಂಬರ್ 6ರಂದು ಉಡುಪಿ ಜಿಲ್ಲೆಯ ಮಣಿಪಾಲದ ಸಿಂಡಿಕೇಟ್ ಸರ್ಕಲ್‌ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಪ್ರತಿಭಟನೆಯ ವೇಳೆ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿಯನ್ನು ದಹಿಸಲಾಗಿತ್ತು ಎಂದು ಆರೋಪಿಸಲಾಗಿತ್ತು.

ಈ ಸಂಬಂಧ ಎನ್‌ಎಸ್‌ಯುಐ (NSUI) ಮುಖಂಡ ಸೌರಭ್ ಬಲ್ಲಾಳ್ ಅವರು ಮಣಿಪಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪೊಲೀಸರು ಶಾಸಕ ಯಶ್‌ಪಾಲ್ ಸುವರ್ಣ ಸೇರಿದಂತೆ ಒಟ್ಟು 11 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.

ಹೈಕೋರ್ಟ್ ಆದೇಶದಲ್ಲಿ ಏನಿದೆ?

ತಮ್ಮ ವಿರುದ್ಧದ ಎಫ್‌ಐಆರ್ ರದ್ದು ಕೋರಿ ಶಾಸಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಈ ಮಹತ್ವದ ಆದೇಶ ನೀಡಿದ್ದಾರೆ.

ಅರ್ಜಿದಾರರ ವಿರುದ್ಧ ಯಾವುದೇ ನೇರ ಅಥವಾ ಪ್ರಾಥಮಿಕ ಸಾಕ್ಷ್ಯಾಧಾರಗಳಿಲ್ಲದೆ ತನಿಖೆಗೆ ಅನುಮತಿ ನೀಡುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಹರಿಯಾಣ ಸರ್ಕಾರ ಮತ್ತು ಭಜನ್ ಲಾಲ್ ಪ್ರಕರಣದ ಪ್ರಮುಖ ತೀರ್ಪನ್ನು ಉಲ್ಲೇಖಿಸಿದ ನ್ಯಾಯಪೀಠ, ಶಾಸಕ ಯಶ್‌ಪಾಲ್ ಸುವರ್ಣ ಮತ್ತು ಇತರರ ವಿರುದ್ಧದ ಎಫ್‌ಐಆರ್ ಅನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ.

Indian Mangoes: ಜಪಾನ್ ಬಳಿಕ, ಈಗ ನೇಪಾಳದಿಂದಲೂ ಭಾರತದ ಮಾವಿನಹಣ್ಣಿಗೆ ನಿರ್ಬಂಧ

Share. Facebook Twitter LinkedIn WhatsApp Email

Related Posts

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

1 Min Read

ರಾಜ್ಯದ ವಿಧಾನಸಭಾ ಕ್ಷೇತ್ರವಾರು ಬೂತ್ ಮಟ್ಟದ ಏಜೆಂಟರ (BLA) ಸಂಪೂರ್ಣ ಪಟ್ಟಿ ಕೋರಿ ಸಿಇಒಗೆ ಪತ್ರ ಬರೆದ ರಮೇಶ್ ಬಾಬು

1 Min Read

SHOCKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೀಚಕ ಕೃತ್ಯ: ಪತಿಯೊಂದಿಗೆ ಜಗಳವಾಡಿ ತವರಿಗೆ ಹೊರಟಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್

2 Mins Read
Recent News

ಜೂನ್ 10ರಂದು ಭಾರತದ ಅತಿ ದೀರ್ಘಕಾಲದ ಚುನಾಯಿತ ಪ್ರಧಾನಿಯಾಗಿ ಮೋದಿ ದಾಖಲೆ | PM Modi

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

ಉಡುಪಿ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧದ FIR ರದ್ದುಗೊಳಿಸಿದ ಹೈಕೋರ್ಟ್

Indian Mangoes: ಜಪಾನ್ ಬಳಿಕ, ಈಗ ನೇಪಾಳದಿಂದಲೂ ಭಾರತದ ಮಾವಿನಹಣ್ಣಿಗೆ ನಿರ್ಬಂಧ

State News
KARNATAKA

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ದಾವಣಗೆರೆ ಉಪಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಬಿ.ಜೆಡ್. ಜಮೀರ್ ಅಹಮದ್ ಖಾನ್ ಅವರ…

ಉಡುಪಿ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧದ FIR ರದ್ದುಗೊಳಿಸಿದ ಹೈಕೋರ್ಟ್

ರಾಜ್ಯದ ವಿಧಾನಸಭಾ ಕ್ಷೇತ್ರವಾರು ಬೂತ್ ಮಟ್ಟದ ಏಜೆಂಟರ (BLA) ಸಂಪೂರ್ಣ ಪಟ್ಟಿ ಕೋರಿ ಸಿಇಒಗೆ ಪತ್ರ ಬರೆದ ರಮೇಶ್ ಬಾಬು

SHOCKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೀಚಕ ಕೃತ್ಯ: ಪತಿಯೊಂದಿಗೆ ಜಗಳವಾಡಿ ತವರಿಗೆ ಹೊರಟಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.