ಬೆಂಗಳೂರು; ಕೇತಗಾನಹಳ್ಳಿ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಕೇತಗಾನಹಳ್ಳಿ ಕೇಸಿನಲ್ಲಿ ಏಕಸದಸ್ಯ ಪೀಠ ನೀಡಿದ್ದಂತ ಮಧ್ಯಂತರ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಈ ಮೂಲಕ ಎಸ್ಐಟಿ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದಂತೆ ಆಗಿದೆ.
ಇಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಸಂಬಂಧಿಸಿದಂತ ಕೇತಗಾನಹಳ್ಳಿ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪದಲ್ಲಿ ಹೈಕೋರ್ಟ್ ಶಾಕ್ ನೀಡಿದೆ. ಏಕಸದಸ್ಯ ಪೀಠ ನೀಡಿದ್ದ ಮಧ್ಯಂತರ ಆದೇಶಕ್ಕೆ ತಡೆಯಾಜ್ಞೆ ನೀಡಲಾಗಿದೆ.
ಸಿಜೆ ವಿಭು ಜಖ್ರು, ನ್ಯಾಯಮೂರ್ತಿ ಸಿಎಂ ಜೋಶಿ ಅವರಿದ್ದಂತ ನ್ಯಾಯಪೀಠವು ಈ ಆದೇಶ ಮಾಡಿದೆ. ನವೆಂಬರ್ 26ರವರೆಗೆ ಏಕಸದಸ್ಯ ಪೀಠದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಎಸ್ಐಟಿ ರಚನೆಗೆ ಏಕಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು. ಈ ಆದೇಶವನ್ನು ರಾಜ್ಯ ಸರ್ಕಾರ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿತ್ತು. ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಿತ್ತು. 6 ಎಕರೆ ಒತ್ತುವರಿ ತೆರವಿಗೆ ಸರ್ಕಾರ ಕ್ರಮ ಕೈಗೊಂಡಿದೆ. ದಾಖಲೆ ಹಾಜರುಪಡಿಸುವಂತೆ ಎಸ್ಐಟಿಗೆ ನೋಟಿಸ್ ಜಾರಿಗೊಳಿಸಿದೆ. ಆದರೇ ಎಸ್ಐಟಿ ರಚನೆಗೆ ಏಕಸದಸ್ಯ ಪೀಠ ತಡೆಯಾಜ್ಞೆ ನೀಡಿದೆ. ಹೀಗಾಗಿ ತಡೆಯಾಜ್ಞೆ ತೆರವಿಗೆ ಎಜಿ ಶಶಿಕಿರಣ್ ಶೆಟ್ಟಿ ಮನವಿ ಮಾಡಿದ್ದರು.
ಹೈಕೋರ್ಟ್ ಆದೇಶದಿಂದ ಎಸ್ಐಟಿ ತನಿಖೆ ಮುಂದುವರೆಯಲಿದೆ. ಈ ಮೂಲಕ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಬಿಗ್ ಶಾಕ್ ನೀಡಲಾಗಿದೆ.
ಭಾರತೀಯ ಸೇನೆಗೆ ಸೇರ ಬಯಸೋರಿಗೆ ಗುಡ್ ನ್ಯೂಸ್: ಉಚಿತ ಮಾರ್ಗದರ್ಶನ, ತರಬೇತಿಗೆ ಅರ್ಜಿ ಆಹ್ವಾನ
BREAKING : ನೇಪಾಳದಲ್ಲಿ ಸಾಮಾಜಿಕ ಮಾಧ್ಯಮ ನಿಷೇಧ ವಿರೋಧಿಸಿ ಬೃಹತ್ ಪ್ರತಿಭಟನೆ ; ಒರ್ವ ಸಾವು, 80 ಜನರಿಗೆ ಗಾಯ