ಬೆಂಗಳೂರು: ಶಸ್ತ್ರಾಸ್ತ್ರ ಕಾಯ್ದೆಯಡಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ದಾಖಲಾಗಿದ್ದಂತ ಎಫ್ಐಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ಮೂಲಕ ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್ ನೀಡಿದೆ.
ಶಸ್ತ್ರಾಸ್ತ್ರ ಕಾಯ್ದೆಯಡಿ ದಾಖಲಾಗಿದ್ದಂತ ಎಫ್ಐಆರ್ ರದ್ದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದಂತ ನ್ಯಾಯಪೀಠವು ಮಧ್ಯಂತರ ತಡೆಯನ್ನು ನೀಡಿ ಆದೇಶಿಸಿದೆ.
ಅಂದಹಾಗೇ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ದಾಖಲಾಗಿದ್ದಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋರ್ಟ್ ನಲ್ಲಿ ಇಂದು ಅದು ಏರ್ ಗನ್ ಆಗಿದೆ. ಅದಕ್ಕೆ ಲೈಸೆನ್ಸ್ ಅಗತ್ಯವಿಲ್ಲದಿದ್ದರೂ ಕೇಸ್ ದಾಖಲಿಸಿರುವುದಾಗಿ ಅವರ ಪರ ವಕೀಲರು ವಾದಿಸಿದ್ದರು. ಈ ಹಿನ್ನಲೆಯಲ್ಲಿ ಹೈಕೋರ್ಟ್ ಮಧ್ಯಂತರ ತಡೆ ನೀಡಿ, ವಿಚಾರಣೆಯನ್ನು ನವೆಂಬರ್.3ನೇ ವಾರಕ್ಕೆ ಮುಂದೂಡಿಕೆ ಮಾಡಿದೆ.
BREAKING: ರಾಜ್ಯದಲ್ಲಿ 1,200 ಚ.ಅಡಿ ವಿಸ್ತೀರ್ಣದ ಕಟ್ಟಡಗಳಿಗೆ ‘ಓಸಿ ವಿನಾಯಿತಿ’ ನೀಡಿ ಸರ್ಕಾರ ಅಧಿಕೃತ ಆದೇಶ








