ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿಯಾಗಿದ್ದಂತ ಸರ್ದಾರ್ ಸರ್ಫರಾಜ್ ಖಾನ್ ವಿರುದ್ಧದ ಲೋಕಾಯುಕ್ತ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆಯನ್ನು ನೀಡಿದೆ. ಆ ಮೂಲಕ ಸರ್ದಾರ್ ಸರ್ಫರಾಜ್ ಖಾನ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಈ ಕುರಿತು ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ಧ ಹೈಕೋರ್ಟ್ ನ್ಯಾಯಪೀಠವು ವಿಚಾರಣೆ ನಡೆಸಿತು. ಆಸ್ತಿಗಳ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಘೋಷಣೆ ಮಾಡಿಕೊಂಡಿದ್ದಾರೆ ಎಂಬುದಾಗಿ ಅರ್ಜಿದಾರರ ಪರ ಹಿರಿಯ ವಕೀಲ ಸಿ.ಹೆಚ್ ಜಾಧವ್ ವಾದಿಸಿದರು.
ಈ ವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು, ಸಚಿವರ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ತಡೆಯಾಜ್ಞೆ ನೀಡಿದೆ.
BIG NEWS: ರಾಜ್ಯ ಸರ್ಕಾರ ‘ಗ್ರಾಮ ಪಂಚಾಯ್ತಿ’ಗಳಿಗೆ ನೇಮಿಸಿರುವ ‘ಆಡಳಿತಾಧಿಕಾರಿ ಕರ್ತವ್ಯ’ಗಳೇನು? ಇಲ್ಲಿದೆ ಮಾಹಿತಿ
BIG NEWS : ಹಲವು ಷರತ್ತುಗಳೊಂದಿಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ‘RCB’ ಪಂದ್ಯಕ್ಕೆ ಅನುಮತಿ ಸಾಧ್ಯತೆ!








