ಬೆಂಗಳೂರು: ದೆಹಲಿ ಚಲೋ ವಿರೋಧಿಸಿ ವಿಧಾನಸೌಧದ ಬಳಿಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದರೇ, ಇದನ್ನು ವಿರೋಧಿಸಿ ಯುವ ಕಾಂಗ್ರೆಸ್ ನಿಂದ ರಾಜ್ಯ ಬಿಜೆಪಿ ಕಚೇರಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಇದೀಗ ರಾಜ್ಯ ಬಿಜೆಪಿ ಕಚೇರಿ ಮುಂದೆ ಹೈಡ್ರಾಮಾವೇ ನಡೆಯುತ್ತಿದ್ದು, ಕಚೇರಿಗೆ ಮುತ್ತಿಗೆಗೆ ಯತ್ನಿಸಿದಂತ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂ ಕಚೇರಿಗೆ ಇಂದು ಕರ್ನಾಟಕ ಯುವ ಕಾಂಗ್ರೆಸ್ ನಿಂದ ಮುತ್ತಿಗೆ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ ಹಾಕೋದಕ್ಕೆ ಯತ್ನಿಸಿದ್ರೇ, ಅವರನ್ನು ತಡೆಯೋದಕ್ಕೆ ಬಿಜೆಪಿ ಕಾರ್ಯಕರ್ತರು ಹನುಮಧ್ವಜ ಹಿಡಿದು, ಮೋದಿ ಪರ ಘೋಷಣೆಗಳನ್ನು ಕೂಗಿದಂತ ಘಟನೆ ನಡೆದಿದೆ.
ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ತಡೆಯೋದಕ್ಕೆ ಸ್ಥಳದಲ್ಲಿ ಇದ್ದಂತ ಪೊಲೀಸರು ಹರಸಾಹಸ ನಡೆಸಿದ್ದಾರೆ. ಕೊನೆಗೆ ರಾಜ್ಯ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕೋದಕ್ಕೆ ಯತ್ನಿಸಿದಂತ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
‘ಮೋದಿ 3ನೇ ಬಾರಿ ಪ್ರಧಾನಿ’ಯಾದ ಒಂದೇ ತಿಂಗಳಲ್ಲಿ ‘ಕಾಂಗ್ರೆಸ್’ ಇಬ್ಬಾಗ – ಬೊಮ್ಮಾಯಿ ಭವಿಷ್ಯ
BREAKING : ದೆಹಲಿ ಮದ್ಯ ಹಗರಣ : ಫೆ.17ರೊಳಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ‘ಸಿಎಂ ಕೇಜ್ರಿವಾಲ್’ಗೆ ಕೋರ್ಟ್ ಸಮನ್ಸ್