ಬೆಂಗಳೂರು: ನಗರದಲ್ಲಿನ ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮದ ಬೆನ್ನಲ್ಲೇ, ಮತದಾರರ ಮಾಹಿತಿಯನ್ನು ಅಕ್ರಮವಾಗಿ ಸಂಗ್ರಹಿಸಲಾಗುತ್ತಿದೆ ಎನ್ನುವಂತ ಆರೋಪ ನಗರದಲ್ಲಿ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿಯೇ ಇಬ್ಬರನ್ನು ಯಶವಂತಪುರ ಪೊಲೀಸ್ ಠಾಣೆಗೆ ಸ್ಥಳೀಯರು ಹಿಡಿದು ಕೊಟ್ಟಿದ್ದಾರೆ. ಅವರು ಕಾಂಗ್ರೆಸ್ ನ ಸಂಸದ ಡಿಕೆ ಸುರೇಶ್, ಹೆಚ್ ಕುಸುಮಾ ಪೋಟೋ ಇಟ್ಟುಕೊಂಡಿದ್ದರು ಎನ್ನುವ ಕಾರಣಕ್ಕಾಗಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಯ ಮುಂದೆ ಪ್ರತಿಭಟನೆ ನಡೆಸಲಾಗುತ್ತಿದೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷದಿಂದಲೂ ಪ್ರತಿಭಟನೆ ನಡೆಸಲಾಗುತ್ತಿದ್ದು, ಠಾಣೆಯ ಎದುರು ಹೈಡ್ರಾಮಾವೇ ಏರ್ಪಟ್ಟಿದೆ.
ಬೆಂಗಳೂರಿನ ಯಶವಂತಪುರ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾರರ ಮಾಹಿತಿಯನ್ನು ಅಕ್ರಮವಾಗಿ ಸಂಗ್ರಹಿಸುತ್ತಿದ್ದಂತ ಇಬ್ಬರನ್ನು ಸ್ಥಳೀಯರು ಹಿಡಿದಿದ್ದರು. ಅವರನ್ನು ಶ್ಯಾಮ್ ಹಾಗೂ ಗೋಪಿ ಎಂಬುದಾಗಿ ಗುರುತಿಸಲಾಗಿತ್ತು. ಇಬ್ಬರನ್ನು ಯಶವಂತಪುರ ಪೊಲೀಸ್ ಠಾಣೆಗೆ ಒಪ್ಪಿಸಲಾಗಿತ್ತು. ಇದೀಗ ಪೊಲೀಸರು ಅವರನ್ನು ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಅವರ ಬಳಿಯಲ್ಲಿ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಹಾಗೂ ಹೆಚ್ ಕುಸುಮಾ ಅವರ ಚಿತ್ರವಿದ್ದ ಕಾರಣ, ಈಗ ವಿವಾದಕ್ಕೆ ಕಾರಣವಾಗಿದೆ.
ರೌಡಿ ಮೋರ್ಚಾ ಕಟ್ಟಿಕೊಂಡು ಈ ಸವಾಲು ಹಾಕಿದಿರಾ ಬಸವರಾಜ ಬೊಮ್ಮಾಯಿ ಅವರೇ?: ಟ್ವಿಟ್ ನಲ್ಲಿ ಕಾಂಗ್ರೆಸ್ ಪ್ರಶ್ನೆ
ಕಾಂಗ್ರೆಸ್ ಪಕ್ಷದಿಂದಲೂ ಅಕ್ರಮವಾಗಿ ಮತದಾರರ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ ಎಂಬುದಾಗಿ ಆರೋಪಿಸಿ ಬಿಜೆಪಿ ಮಾಜಿ ಕಾರ್ಪೊರೇಟರ್ ವೆಂಕಟೇಶ್ ನೇತೃತ್ವದಲ್ಲಿ ಯಶವಂತಪುರ ಠಾಣೆಯ ಎದುರು ಪ್ರತಿಭಟನೆ ನಡೆಸಲಾಗುತ್ತಿದೆ. ಮತ್ತೊಂದೆಡೆ ಕಾಂಗ್ರೆಸ್ ನಾಯಕಿ ಕುಸುಮಾ ನೇತೃತ್ವದಲ್ಲಿಯೂ ಠಾಣೆಯ ಮುಂದೆ ಪ್ರತಿಭಟನೆ ನಡೆಸಲಾಗುತ್ತಿದ್ದಾರೆ. ಅಲ್ಲದೇ ಬಿಜೆಪಿ-ಕಾಂಗ್ರೆಸ್ ನಾಯಕರು ಪರಸ್ಪರ ಘೋಷಣೆ ಕೂಗುತ್ತಿರುವುದರಿಂದ ಠಾಣೆಯ ಮುಂದೆ ಹೈಡ್ರಾಮಾವೇ ಏರ್ಪಟ್ಟಿದೆ.
ಅಂಗವಿಕಲರಿಗೆ ಭರ್ಜರಿ ಗುಡ್ ನ್ಯೂಸ್: ಆರೋಗ್ಯಕ್ಕಾಗಿ ವಿಶೇಷ ವಿಮಾ ಯೋಜನೆ, ವಸತಿ ಯೋಜನೆಯಲ್ಲಿ ಶೇ.2ರಷ್ಟು ಮೀಸಲಾತಿ