ಬೆಂಗಳೂರು : ರಸ್ತೆ ಅಪಘಾತದಲ್ಲಿ ಸಾಕು ನಾಯಿ ಗಾಯಗೊಳಿಸಿದರೆ ಅಪಘಾತವಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. ಪ್ರಕರಣವೊಂದರ ವಿಚಾರಣೆ ನಡೆಸಿದ ಕೋರ್ಟ್ ರಸ್ತೆ ಅಪಘಾತದಲ್ಲಿ ಕಾರು ಚಲಾಯಿಸಿ ಸಾಕು ನಾಯಿಯನ್ನು ಗಾಯಗೊಳಿಸಿ, ಅದರ ಸಾವಿಗೆ ಕಾರಣವಾದರೆ ಅದು ಅಪರಾಧವಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. ಕಾರು ಚಾಲಕನ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಕೇಸ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ.
ಭಾರತೀಯ ದಂಡ ಸಂಹಿತೆ(ಐಪಿಸಿ) 279 ಮಾನವರಿಗೆ ಮಾತ್ರ ಅನ್ವಯಿಸುತ್ತವೆ ಎಂದು ತಿಳಿಸಿರುವ ಹೈಕೋರ್ಟ್, ರಸ್ತೆ ಅಪಘಾತಗಳಲ್ಲಿ ಸಾಕು ನಾಯಿಗಳಿಗೆ ಪೆಟ್ಟಾದಲ್ಲಿ ಇದೇ ಸೆಕ್ಷನ್ ಅಡಿಯಲ್ಲಿ ಕ್ರಮ ಕೈಗೊಳ್ಳುವುದಕ್ಕೆ ಆಗುವುದಿಲ್ಲ ಎಂದು ಹೇಳಿದೆ.
ಘಟನೆ ಹಿನ್ನೆಲೆ
2018ರ ಫೆಬ್ರವರಿ 24ರಂದು ಈ ಘಟನೆ ನಡೆದಿದ್ದು, ತನ್ನ ತಾಯಿ ಎರಡು ಸಾಕು ನಾಯಿಗಳೊಂದಿಗೆ ವಾಕಿಂಗ್ ಗೆ ತೆರಳಿದ್ದಾಗ ವಾಹನವೊಂದು ನಾಯಿಗೆ ಡಿಕ್ಕಿ ಹೊಡೆದು ಗಾಯಗೊಂಡಿತ್ತು, ಕೂಡಲೇ ನಾಯಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರಾದರೂ ಅದು ಮೃತಪಟ್ಟಿತು ಎಂದು ಕುರುಬರಹಳ್ಳಿಯ ದಿಲ್ರಾಜ್ ರಾಖೇಜಾ ವಿಜಯನಗರ ಠಾಣೆಗೆ ದೂರು ದಾಖಲಿಸಿದ್ದರು.
ನಂತರ ದೂರು ದಾಖಲಿಸಿಕೊಂಡಿದ್ದ ಪೊಲೀಸರು ವಾಹನ ಚಾಲಕ ಪ್ರತಾಪ್ ವಿರುದ್ಧ ಮೋಟಾರು ವಾಹನ ಕಾಯಿದೆ 134(ಎ),(ಬಿ) ಮತ್ತು 187 ಹಾಗೂ ಐಪಿಸಿ 279, 428, 429 ಅಡಿಯಲ್ಲಿ ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ಬಳಿಕ ನಗರದ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಆರೋಪ ಪಟ್ಟಿಯನ್ನು ಸಲ್ಲಿಸಿದ್ದರು. ನಂತರ ಪ್ರಕರಣ ರದ್ದುಕೋರಿ ಪ್ರತಾಪ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.ನಂತರ ವಿಚಾರಣೆ ನಡೆಸಿದ ಕೋರ್ಟ್ ಕಾರು ಚಲಾಯಿಸಿ ಸಾಕು ನಾಯಿಯನ್ನು ಗಾಯಗೊಳಿಸಿ, ಅದರ ಸಾವಿಗೆ ಕಾರಣವಾದರೆ ಅದು ಅಪರಾಧವಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. ಕಾರು ಚಾಲಕನ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಕೇಸ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ.
BIGG NEWS : ಶಾಸಕ ಅರವಿಂದ ಬೆಲ್ಲದ್ ಹೆಸರಿನಲ್ಲಿ ಡೆತ್ ನೋಟ್ ಬರೆದು ಮಹಿಳೆ ಆತ್ಮಹತ್ಯೆಗೆ ಯತ್ನ!
BIG NEWS: ಮಧ್ಯಪ್ರದೇಶದಲ್ಲಿ ಕಿಡಿಗೇಡಿಗಳಿಂದ ʻಮಹಾತ್ಮ ಗಾಂಧಿʼ ಪ್ರತಿಮೆಗೆ ಹಾನಿ, ಎಫ್ಐಆರ್ ದಾಖಲು
Karnataka Politics: ಮಹಿಳೆಯರ ಮೇಲೆ ಬಿಜೆಪಿಗರ ದರ್ಪ, ದೌರ್ಜನ್ಯ ಮಿತಿ ಮೀರುತ್ತಿದೆ – ಕಾಂಗ್ರೆಸ್