ಮಂಡ್ಯ : ಶಿಕ್ಷಣದಿಂದ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂಬುವುದನ್ನು ವಿದ್ಯಾರ್ಥಿಗಳು ಅರಿತು ಕಠಿಣ ಪರಿಶ್ರಮ ಪಟ್ಟು ವ್ಯಾಸಂಗ ಮಾಡಿ ಸಮಾಜದಲ್ಲಿ ಉನ್ನತ ಸ್ಥಾನ ಮಾನಗಳಿಸಬೇಕೆಂದು ಮದ್ದೂರು ಶಾಸಕ ಕೆ.ಎಂ.ಉದಯ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಮದ್ದೂರು ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ 2024-25 ಯೋಜನೆಯಡಿ 70.53 ಲಕ್ಷ ರೂ.ವೆಚ್ಚದ ಕಟ್ಟಡದ ನವೀಕರಣ ಕಾಮಗಾರಿ ಮಂಗಳವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರ ಹಲವಾರು ಸೌಲಭ್ಯಗಳನ್ನು ನೀಡುತ್ತಿದ್ದು, ಇದನ್ನು ಸದ್ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳು ಉತ್ತಮ ಬದುಕು ಕಟ್ಟಿಕೊಂಡು ಪಾಲಕರಿಗೆ ಹಾಗೂ ಶಿಕ್ಷಕರಿಗೆ ಕೀರ್ತಿ ತರಬೇಕೆಂದರು.
ಕ್ಷೇತ್ರದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು, ಸರ್ಕಾರದಿಂದ ನೂತನ ಕೊಠಡಿಗಳ ನಿರ್ಮಾಣ, ಪ್ರಯೋಗಾಲಯ, ಶೌಚಗೃಹ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿದೆ ಜತೆಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ವಿಶೇಷ ಅನುದಾನ ತಂದು ಉನ್ನತ ಶಿಕ್ಷಣಕ್ಕೆ ಅನುಕೂಲ ಕಲ್ಪಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ನಗರ ಸಭಾ ಮಾಜಿ ಅಧ್ಯಕ್ಷೆ ಕೋಕಿಲಾ ಅರುಣ್, ಮಾಜಿ ಉಪಾಧ್ಯಕ್ಷ ಟಿ.ಆರ್.ಪ್ರಸನ್ನಕುಮಾರ್, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ವನಿತಾ, ಮಾಜಿ ಸದಸ್ಯರಾದ ಎಂ.ಬಿ.ಸಚಿನ್, ಬಸವರಾಜು, ಸಿದ್ದರಾಜು, ಪ್ರಮೀಳ, ಪ್ರಾಂಶುಪಾಲ ನಾರಾಯಣ, ಮುಖಂಡರಾದ ವಿಜಯ್ ಕುಮಾರ್, ಎಂ.ಡಿ.ಮಹಾಲಿಂಗಯ್ಯ, ಮಹದೇವಯ್ಯ, ಸಂತೋಷ್, ಸಿದ್ದರಾಜು ಸೇರಿದಂತೆ ಮತ್ತಿತರರು ಇದ್ದರು.
ವರದಿ; ಗಿರೀಶ್ ರಾಜ್, ಮಂಡ್ಯ
BREAKING: ಇಂಡಿಯನ್ ಸೂಪರ್ ಲೀಗ್ (ISL) ಸೀಸನ್ ಆರಂಭಕ್ಕೆ ಮುಹೂರ್ತ ಫಿಕ್ಸ್: ಫೆಬ್ರವರಿ 14 ರಿಂದ ಲೀಗ್ ಆರಂಭ








