Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಷಕ್ಕೆ ಸಮಾನ.! ಈ ಸಮಸ್ಯೆ ಇರುವವರು ಮರೆತು ಕೂಡ ‘ಬೀಟ್ರೂಟ್’ ತಿನ್ನಬಾರದು.!

07/07/2025 10:09 PM

ನಿಮ್ಮ ಮಕ್ಕಳು ಊಟ ಮಾಡುವುಕ್ಕೆ ಹಟ ಮಾಡ್ತಿದ್ದಾರಾ.? ಈ ಬಾರಿ ಇದನ್ನ ಟ್ರೈ ಮಾಡಿ!

07/07/2025 9:42 PM

‘YouTube’ ಹೊಸ ರೂಲ್ಸ್ ; ಇನ್ಮುಂದೆ ‘AI- ರಚಿತ, ಪುನರಾವರ್ತಿತ ವಿಷಯ’ ಹಾಕಿದ್ರೆ ‘ಹಣ’ ಸಿಗೋದಿಲ್ಲ

07/07/2025 9:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ವಿವಿಧೆಡೆ ಅತೀ ಹೆಚ್ಚು ‘ತಾಪಮಾನ’: ಸಾರ್ವಜನಿಕರೇ ತಪ್ಪದೇ ‘ಈ ಸಲಹೆ’ ಪಾಲಿಸಿ
KARNATAKA

ರಾಜ್ಯದ ವಿವಿಧೆಡೆ ಅತೀ ಹೆಚ್ಚು ‘ತಾಪಮಾನ’: ಸಾರ್ವಜನಿಕರೇ ತಪ್ಪದೇ ‘ಈ ಸಲಹೆ’ ಪಾಲಿಸಿ

By kannadanewsnow0923/04/2024 12:38 PM

ಬೆಂಗಳೂರು: ಭಾರತ ಹವಾಮಾನ ಇಲಾಖೆ (IMD) ಯು ಈ ವರ್ಷದಲ್ಲಿ ಅತೀ ಹೆಚ್ಚು ತಾಪಮಾನ (Heat Wave) ಕುರಿತು ಹೊರಡಿಸಿದ ಮುನ್ಸೂಚನೆ ಅನ್ವಯ ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಗರಿಷ್ಠ ತಾಪಮಾನವನ್ನು ಸೂಚಿಸುತ್ತದೆ. ಹೀಗಾಗಿ ಕೆಲ ಸಲಹೆಗಳನ್ನು ತಪ್ಪದೇ ಸಾರ್ವಜನಿಕರು ಪಾಲಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.

ಪ್ರಸ್ತುತ, ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳ ಕೆಲವು ಭಾಗಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ 2-3 ಡಿಗ್ರಿಗಳಷ್ಟು ಅಧಿಕ ತಾಪಮಾನ ದಾಖಲಾಗುತ್ತಿದ್ದು, ಇದು ಮಾನವ ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಭಾರತೀಯ ಹವಾಮಾನ ಇಲಾಖೆಯು ಏಪ್ರಿಲ್ 2024ರ ಸಂಭವನೀಯತೆಯ ಮುನ್ನೋಟವನ್ನು ಆಧರಿಸಿ, ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್ ಮಾಹೆಯಿಂದ ಮೇ- 2024 ರ ಅವಧಿಯಲ್ಲಿ ಬಿಸಿ ವಾತಾವರಣವು ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಾಗಿ ಇರುತ್ತದೆ ಎಂದು ಸೂಚಿಸಿರುತ್ತದೆ. ತಾಪಮಾನದ ಮುನ್ಸೂಚನೆಯ ಹೆಚ್ಚಳವು ರಾಜ್ಯದಾದ್ಯಂತ ಸಾಮಾನ್ಯ ಶಾಖದ ಅಲೆಗಳ ದಿನಗಳನ್ನು 2-14 ದಿನಗಳು ಮೀರುವ ಸಾಧ್ಯತೆಯಿದೆ. ಅಲ್ಲದೇ, ಈಗಾಗಲೇ ರಾಜ್ಯದಲ್ಲಿ 223 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿರುವುದರಿಂದ, ಅತೀ ಹೆಚ್ಚು ತಾಪಮಾನ ಪ್ರತಿಕೂಲ ಪರಿಣಾಮವನ್ನು ತಡೆಗಟ್ಟಲು ಮತ್ತು ತಗ್ಗಿಸಲು ಈ ಕೆಳಕಂಡ ಸಲಹೆ /ಸೂಚನೆಗಳನ್ನು ನೀಡಿದೆ.

ಅತೀ ಹೆಚ್ಚು ತಾಪಮಾನದಿಂದ ಉಂಟಾಗುವ ಅನಾರೋಗ್ಯವನ್ನು ತಡೆಗಟ್ಟಲು ಸಾಮಾನ್ಯ ಸೂಚನೆಗಳು

ಸಾಧ್ಯವಾದಷ್ಟು ಮಟ್ಟಿಗೆ ವಿಶೇಷವಾಗಿ ಗರಿಷ್ಠ ತಾಪಮಾನದ ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸುವುದು (ಮಧ್ಯಾಹ್ನ 12.00 ರಿಂದ 3.00 ರವರೆಗೆ). ಕಾಲಕಾಲಕ್ಕೆ ಸಾಕಷ್ಟು ನೀರು ಕುಡಿಯುವುದು. ಹಗುರವಾದ, ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿಬಟ್ಟೆಗಳನ್ನು ಧರಿಸುವುದು. ಬಿಸಿಲಿನಲ್ಲಿ ಹೋಗುವಾಗ ರಕ್ಷಣೆಗಾಗಿ ಕನ್ನಡಕಗಳು, ಛತ್ರಿ / ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸುವುದು. ಹೊರಗಿನ ಉಷ್ಣತೆಯು ಅಧಿಕವಾಗಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸುವುದು (ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗೆ ಕೆಲಸ ಮಾಡುವುದನ್ನು). ಪ್ರಯಾಣ ಮಾಡುವಾಗ, ನೀರನ್ನು ಜೊತೆಯಲ್ಲಿ ಒಯ್ಯುವುದು.

ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ತಪ್ಪಿಸುವುದು. ಸಾಧ್ಯವಾದಷ್ಟು ಬಿಸಿ ಆಹಾರವನ್ನು ಸೇವಿಸುವುದು. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡದಿರುವುದು. ಮೂರ್ಛೆ ಅಥವಾ ಅನಾರೋಗ್ಯ ಅನಿಸಿದರೆ ತಕ್ಷಣ ವೈದ್ಯರನ್ನು ಭೇಟಿಮಾಡುವುದು. ನಿಂಬೆ ನೀರು, ಮಜ್ಜಿಗೆ ಮುಂತಾದ ಮನೆಯಲ್ಲಿ ತಯಾರಿಸಿದ ಪಾನೀಯಗಳು ಮತ್ತು ಓಆರ್‍ಎಸ್ ಅನ್ನು ಬಳಸುವುದು. ಸಾಕುಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಒದಗಿಸುವುದು. ಮನೆಯನ್ನು ತಂಪಾಗಿರಿಸಲು ಪರದೆಗಳು, ಶಟರ್‍ ಗಳು ಅಥವಾ ಸನ್‍ಶೇಡ್‍ಗಳನ್ನು ಬಳಸುವುದು.

ಆಗ್ಗಿಂದಾಗೆ ತಣ್ಣೀರು ಸ್ನಾನ ಮಾಡುವುದು. ಹೊರಗೆ ಹೋಗುವಾಗ ನೀರಿನ ಬಾಟಲಿ, ಛತ್ರಿ / ಟೋಪಿ ಅಥವಾ ಕ್ಯಾಪ್ / ಹೆಡ್‍ಕವರ್, ಹ್ಯಾಂಡ್‍ಟವೆಲ್, ಹ್ಯಾಂಡ್ ಪ್ಯಾನ್, ಎಲೆಕ್ಟೋಲೈಟ್ / ಗ್ಲೂೀಕೋಸ್ / ಓಆರ್‍ಎಸ್‍ಅನ್ನು ಒಳಗೊಂಡಿರುವ ಅತೀ ಹೆಚ್ಚು ತಾಪಮಾನವನ್ನು ತಡೆಗಟ್ಟುವ ಕಿಟ್‍ಅನ್ನು ಒಯ್ಯುವುದು.

ಅತೀ ಹೆಚ್ಚು ತಾಪಮಾನದಿಂದ ಆರೋಗ್ಯದ ಮೇಲಾಗುವ ಪರಿಣಾಮಗಳು ಹಾಗೂ ಗುರುತಿಸುವಿಕೆ

ಅತೀ ಹೆಚ್ಚು ತಾಪಮಾನದಿಂದ ಸಾಮಾನ್ಯವಾಗಿ ನಿರ್ಜಲೀಕರಣ, ಶಾಖ ಸೆಳೆತ, ಶಾಖದ ಬಳಲಿಕೆ ಮತ್ತು / ಅಥವಾ ಶಾಖದ ಅಘಾತದಂತಹ ಆರೋಗ್ಯದ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆ ಇದ್ದು, ಅವುಗಳ ರೋಗ ಲಕ್ಷಣಗಳು ಈ ಕೆಳಕಂಡಂತಿವೆ:

ಶಾಖ ಸೆಳೆತಗಳು (Heat cramps) : ಎಡೆರ್ನಾ (ಊತ) ಮತ್ತು ಮೂರ್ಛೆ ಸಾಮಾನ್ಯವಾಗಿ 39 ಡಿ.ಸೆ. ಅಂದರೆ 102 °F ಗಿಂತ ಕಡಿಮೆ ಜ್ವರದಿಂದ ಕೂಡಿರುತ್ತದೆ.

ಶಾಖದ ಬಳಲಿಕೆ : ಆಯಾಸ, ದೌರ್ಭಲ್ಯ, ತಲೆ ತಿರುಗುವಿಕೆ, ತಲೆ ನೋವು, ವಾಕರಿಕೆ, ವಾಂತಿ, ಸ್ನಾಯು ಸೆಳೆತ ಮತ್ತು ಬೆವರುವುದು.

ಶಾಖಾಘಾತ (Sun Stroke) : ದೇಹದ ಉಷ್ಣತೆಯು 40 ಡಿ.ಸೆ. ಅಂದರೆ 104 °F ಅಥವಾ ಅದಕ್ಕಿಂತ ಹೆಚ್ಚಾಗುವುದು ಹಾಗೂ ಉಸಿರಾಟದಲ್ಲಿ ವ್ಯತ್ಯಯ ಮತ್ತು ಪ್ರಜ್ಞೆ ತಪ್ಪುವುದು.

ಅತೀ ಹೆಚ್ಚು ತಾಪಮಾನಕ್ಕೆ ಸಂಬಂಧಿತ ಕಾಯಿಲೆಗೆ ಪ್ರಥಮ ಚಿಕಿತ್ಸೆ

ಅತೀ ಹೆಚ್ಚು ತಾಪಮಾನದಿಂದ ತುತ್ತಾದ ವ್ಯಕ್ತಿಯನ್ನು ನೆರಳಿನ ಅಡಿಯಲ್ಲಿ ತಂಪಾದ ಸ್ಥಳಕ್ಕೆ, ಸ್ಥಳಾಂತರಿಸುವುದು. ಒದ್ದೆಯಾದ ಬಟ್ಟೆಯಿಂದ ಮೈ ಒರೆಸುವುದು / ತಂಪಾದ ಒದ್ದೆ ಬಟ್ಟೆಯನ್ನು ಹಾಕುವುದು ಹಾಗೂ ದೇಹದ ಉಷ್ಣತೆಯನ್ನು ತಗ್ಗಿಸಲು ತಲೆಯ ಮೇಲೆ ನೀರನ್ನು ಹಾಕುವುದು. ನೀರು ಅಥವಾ ಪುನರ್ಜಲೀಕರಣ ಪಾನೀಯಗಳಾದ ಓಆರ್‍ಎಸ್. ನಿಂಬೆ ಪಾನಕ ನೀಡುವುದು (ವ್ಯಕ್ತಿ ಇನ್ನೂ ಪ್ರಜ್ಞೆ ಹೊಂದಿದ್ದರೆ). ವ್ಯಕ್ತಿಗೆ ತಂಪಾದ ಗಾಳಿಯ ವ್ಯವಸ್ಥೆ ಮಾಡುವುದು. ಉತ್ತಮ ಗಾಳಿಗಾಗಿ ಬಟ್ಟೆಗಳನ್ನು ಸಡಿಲಗೊಳಿಸುವುದು. ರೋಗ ಲಕ್ಷಣಗಳು ಉಲ್ಬಣಗೊಂಡರೆ ಅಥವಾ ದೀರ್ಘಕಾಲದವರೆಗೆ ಇದ್ದರೆ ಅಥವಾ ವ್ಯಕ್ತಿಯು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೆ ವೈದ್ಯರನ್ನು ಕೂಡಲೇ ಸಂಪರ್ಕಿಸುವುದು. ಮದ್ಯ ಪಾನ, ಕಾಫಿ, ಶೇಖರಿಸಿದ ಪಾನೀಯವನ್ನು ನೀಡಬಾರದು.
ಅತೀ ಹೆಚ್ಚು ತಾಪಮಾನದ ಈ ಸಂದರ್ಭದಲ್ಲಿ ಸಾರ್ವಜನಿಕರು ಅತಿ ಎಚ್ಚರದಿಂದಿರುವಂತೆ ಕಂದಾಯ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಎಸ್.ಆರ್. ಶಿವಶಂಕರ್‍ ರವರು ಸೂಚಿಸಿದ್ದಾರೆ.

ಇಂದು ‘ಬೆಂಗಳೂರು ಕರಗ’ ಮಹೋತ್ಸವ: ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ, ಇಲ್ಲಿದೆ ಪರ್ಯಾಯ ಮಾರ್ಗ

ಅಶ್ಲೀಲ ವಿಡಿಯೋ ವೈರಲ್ ಮಾಡಿದ ಗೆಳೆಯ : ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕಿ ಆತ್ಮಹತ್ಯೆ!

Share. Facebook Twitter LinkedIn WhatsApp Email

Related Posts

ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿ ಮಾಡಿ ವಂಚನೆ: ಪ್ರಿಯಕರನ ಮನೆ ಮುಂದೆ ಧರಣಿ ಕುಳಿತ ಮಹಿಳೆ

07/07/2025 8:29 PM1 Min Read

ರಾಜ್ಯದ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿ: ಸಿಇಒಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

07/07/2025 8:00 PM2 Mins Read

ವೈದ್ಯಕೀಯ ಸೀಟು ಕುರಿತಂತೆ KEAಯಿಂದ ಮಹತ್ವದ ಮಾಹಿತಿ

07/07/2025 7:48 PM1 Min Read
Recent News

ವಿಷಕ್ಕೆ ಸಮಾನ.! ಈ ಸಮಸ್ಯೆ ಇರುವವರು ಮರೆತು ಕೂಡ ‘ಬೀಟ್ರೂಟ್’ ತಿನ್ನಬಾರದು.!

07/07/2025 10:09 PM

ನಿಮ್ಮ ಮಕ್ಕಳು ಊಟ ಮಾಡುವುಕ್ಕೆ ಹಟ ಮಾಡ್ತಿದ್ದಾರಾ.? ಈ ಬಾರಿ ಇದನ್ನ ಟ್ರೈ ಮಾಡಿ!

07/07/2025 9:42 PM

‘YouTube’ ಹೊಸ ರೂಲ್ಸ್ ; ಇನ್ಮುಂದೆ ‘AI- ರಚಿತ, ಪುನರಾವರ್ತಿತ ವಿಷಯ’ ಹಾಕಿದ್ರೆ ‘ಹಣ’ ಸಿಗೋದಿಲ್ಲ

07/07/2025 9:33 PM

‘ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್’ನ್ನ ಹೊಸ ರೂಪದಲ್ಲಿ ವ್ಯಾಖ್ಯಾನಿಸಲಾಗುವುದು’ : ಬ್ರೆಜಿಲ್ ಸಭೆಯಲ್ಲಿ ಪ್ರಧಾನಿ ಮೋದಿ

07/07/2025 8:56 PM
State News
KARNATAKA

ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿ ಮಾಡಿ ವಂಚನೆ: ಪ್ರಿಯಕರನ ಮನೆ ಮುಂದೆ ಧರಣಿ ಕುಳಿತ ಮಹಿಳೆ

By kannadanewsnow0907/07/2025 8:29 PM KARNATAKA 1 Min Read

ಕೋಲಾರ: ವಿವಾಹಿತೆಯನ್ನು ಪ್ರೀತಿಸಿ ಮದುವೆ ಆಗುವುದಾಗಿ ನಂಬಿಸಿ ವಂಚನೆ ಮಾಡಿದ್ದಲ್ಲದೇ, ಗರ್ಭಿಣಿಯಾಗುತ್ತಿದ್ದಂತೆ ಮದುವೆಯಾಗಲು ನಿರಾಕರಿಸಿದಂತ ಪ್ರಿಯಕರನ ಮನೆ ಮುಂದೆ ಮಹಿಳೆ…

ರಾಜ್ಯದ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿ: ಸಿಇಒಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

07/07/2025 8:00 PM

ವೈದ್ಯಕೀಯ ಸೀಟು ಕುರಿತಂತೆ KEAಯಿಂದ ಮಹತ್ವದ ಮಾಹಿತಿ

07/07/2025 7:48 PM

BREAKING: ರಾಜ್ಯದಲ್ಲಿನ ಎಲ್ಲ ಹಠಾತ್ ಸಾವುಗಳನ್ನು ಅಧಿಸೂಚಿತ ಖಾಯಿಲೆಯೆಂದು ಪರಿಗಣಿಸಲು ನಿರ್ಧಾರ: ಸಚಿವ ದಿನೇಶ್ ಗುಂಡೂರಾವ್

07/07/2025 7:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.