ಬೆಂಗಳೂರು: ರಾಜ್ಯದಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್ ಲಭ್ಯವಿದೆ. ಸೌರ ವಿದ್ಯುತ್ ಉತ್ಪಾದನೆಯಲ್ಲಿಯೂ ರಾಜ್ಯ ಮುಂಚೂಣಿಯಲ್ಲಿದೆ. ಹೀಗಾಗಿಯೇ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಮಾಡುತ್ತಿಲ್ಲ ಎಂದು ಇಂಧನ ಸಚಿವರಾದ ಕೆ.ಜೆ ಜಾರ್ಜ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್ ಲಭ್ಯವಿದೆ. ಸೌರ ವಿದ್ಯುತ್ ಉತ್ಪಾದನೆಯಲ್ಲಿಯೂ ರಾಜ್ಯ ಮುಂಚೂಣಿಯಲ್ಲಿದೆ. ಹೀಗಾಗಿಯೇ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಮಾಡುತ್ತಿಲ್ಲ ಎಂದು ಇಂಧನ ಸಚಿವರಾದ @thekjgeorge ತಿಳಿಸಿದ್ದಾರೆ. pic.twitter.com/SGKz0Dgp5n
— DIPR Karnataka (@KarnatakaVarthe) June 3, 2025
ಗೃಹ ಜ್ಯೋತಿ ಯೋಜನೆಯಿಂದ ಸಾಕಷ್ಟು ಅನುಕೂಲವಾಗಿದೆಯಾದರೂ ಬಾಡಿಗೆ ಮನೆ ಬದಲಿಸುವಾಗ ಹಳೆಯ ಆರ್ ಆರ್ ನಂಬರ್ ಗೆ ಡಿ ಲಿಂಕ್ ಮಾಡಿ ಹೊಸ ಆರ್ ಆರ್ ನಂಬರ್ ಗೆ ಲಿಂಕ್ ಮಾಡುವ ವೇಳೆ ಸಮಸ್ಯೆಯಾಗುತ್ತಿದೆ ಎಂಬ ಪಕ್ಷದ ಕಾರ್ಯಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೆ.ಜೆ.ಜಾರ್ಜ್, ಆನ್ ಲೈನ್ ಮೂಲಕವೇ ಡಿ ಲಿಂಕ್ ಮತ್ತು ಲಿಂಕ್ ವ್ಯವಸ್ಥೆ ಮಾಡಲಾಗಿದೆ. ಈ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ. ಒಂದೊಮ್ಮೆ ನಿರ್ದಿಷ್ಟ ವ್ಯಕ್ತಿಗಳಿಗೆ ಸಮಸ್ಯೆ ಕಾಣಿಸಿಕೊಂಡರೆ ಸಂಬಂಧಿಸಿದ ಅಧಿಕಾರಿಗಳನ್ನು ಭೇಟಿಯಾಗಿ ಸಮಸ್ಯೆ ಬಗೆಹರಿಸಿಕೊಳ್ಳಬಹುದು ಎಂದು ಹೇಳಿದರು.
ಗೃಹಜ್ಯೋತಿ ಯೋಜನೆಯಡಿ ಪ್ರಸ್ತುತ 1.60 ಕೋಟಿ ಕುಟುಂಬಗಳು ಶೂನ್ಯ ಬಿಲ್ ಅನುಕೂಲ ಪಡೆದುಕೊಳ್ಳುತ್ತಿದ್ದಾರೆ. ಇದರ ಸಬ್ಸಿಡಿ ಮೊತ್ತ ಸುಮಾರು 9,000 ಕೋಟಿ ರೂ.ಅನ್ನು ಈಗಾಗಲೇ ಸರ್ಕಾರ ಸಂಬಂಧಿಸಿದ ಎಸ್ಕಾಂಗಳಿಗೆ ಬಿಡುಗಡೆ ಮಾಡಿದೆ ಎಂದು ತಿಳಿಸಿದರು.
ನಮ್ಮ ಸರ್ಕಾರ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಆದ್ಯತೆ ನೀಡುವುದರ ಜತೆಗೆ ಬೇಸಿಗೆಯಲ್ಲಿ ಅನ್ಯ ರಾಜ್ಯಗಳಿಂದ ವಿನಿಮಯ ಆಧಾರದ ಮೇಲೆ ವಿದ್ಯುತ್ ಪಡೆದು ಗ್ರಾಹಕರಿಗೆ ಪೂರೈಸಿದ್ದು, ವಿದ್ಯುತ್ ಸಮಸ್ಯೆಯಾಗದಂತೆ ಗಮನಹರಿಸಲಾಗಿದೆ. ಪ್ರಸ್ತುತ ರಾಜ್ಯದ ಒಟ್ಟು ಉತ್ಪಾದನೆ ಪೈಕಿ ಶೇ. 65 ವಿದ್ಯುತ್ ನವೀಕರಿಸಬಹುದಾದ ಇಂಧನ ಮೂಲಗಳಿಂದ ಬರುತ್ತಿದೆ. ಇದರಿಂದಾಗಿ ಪ್ರಸ್ತುತ ಹೆಚ್ಚುವರಿ ವಿದ್ಯುತ್ ರಾಜ್ಯದಲ್ಲಿ ಲಭ್ಯವಿದೆ. ವಿತರಣೆಯಲ್ಲಿ ಆಗುತ್ತಿರುವ ಸಮಸ್ಯೆ ನಿವಾರಿಸಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.