ಉಡುಪಿ : ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಕಾರಣವಾದ ಹಿಜಾಬ್ ವಿವಾದ ಅಂತ್ಯ ಕಂಡಿಲ್ಲ. ಇದರ ನಡುವೆ ಕುಂದಾಪುರ ತಾಲೂಕಿನಲ್ಲಿ ಹಿಜಾಬ್‍ಗೆ ವಿರುದ್ಧವಾಗಿ ಸರ್ಕಾರಿ ಪಿಯು ಕಾಲೇಜ್‍ನ ನೂರಾರು ವಿದ್ಯಾರ್ಥಿಗಳು ಕೇಸರಿ ಶಾಲುಗಳನ್ನು ತೊಟ್ಟು ತರಗತಿಗೆ ಬಂದಿದ್ದಾರೆ.
ಸದ್ಯ ಹೈಕೋರ್ಟ್ ಮೆಟ್ಟಿಲೇರಿದೆ. ಹಿಜಾಬ್ ಧರಿಸುವುದು ಮೂಲಭೂತ ಹಕ್ಕೆಂದು ಮುಸ್ಲಿಂ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದರು.ಉಡುಪಿಯ ಮಹಿಳಾ ಸರ್ಕಾರಿ ಪಿಯು ಕಾಲೇಜಿನಲ್ಲಿ ಆರಂಭವಾದ ಹಿಜಬ್ ವಿವಾದ ಕುಂದಾಪುರಕ್ಕೆ ಹರಡಿದೆ. ಪಿಯು ಬೋರ್ಡ್ ಸಮವಸ್ತ್ರ ಮಾತ್ರ ಧರಿಸಬೇಕು ಎಂದು ಆದೇಶ ನೀಡಿತ್ತು. ಈ ಆದೇಶವನ್ನು ಆಪಾದನೆ ಮಾಡುವಂತೆ ಕುಂದಾಪುರ ಸರ್ಕಾರಿ ಪಿಯು ಕಾಲೇಜ್ ನೋಟಿಸ್ ಹೊರಡಿಸಿದೆ. ಆದರೆ ವಾರ ಕಳೆದರೂ ಹಿಜಬ್ ಬಿಚ್ಚಿಟ್ಟು ಮುಸಲ್ಮಾನ ವಿದ್ಯಾರ್ಥಿನಿಯರು ಕಾಲೇಜಿಗೆ ಬಂದಿಲ್ಲ. ಇದೀಗ ನೂರಾರು ಹಿಂದೂ ಯುವಕರು ಕೇಸರಿ ಶಾಲುಗಳನ್ನು ತೊಟ್ಟು ಕಾಲೇಜು ಕ್ಯಾಂಪಸ್ ಪ್ರವೇಶಿಸಿದ್ದಾರೆ. ಕುಂದಾಪುರ ತಾಲೂಕಿನಲ್ಲಿ ಹಿಜಾಬ್‍ಗೆ ವಿರುದ್ಧವಾಗಿ ಸರ್ಕಾರಿ ಪಿಯು ಕಾಲೇಜ್‍ನ ನೂರಾರು ವಿದ್ಯಾರ್ಥಿಗಳು ಕೇಸರಿ ಶಾಲುಗಳನ್ನು ತೊಟ್ಟು ತರಗತಿಗೆ ಬಂದಿದ್ದಾರೆ.
ಉಡುಪಿ ಜಿಲ್ಲೆಯ ಕಾಲೇಜಿನಲ್ಲಿ ಹಿಜಾಬ್ ಧರಿಸುವಿಕೆ ವಿಚಾರ ಬಹಳ ಚರ್ಚೆಯಾಗುತ್ತಿದ್ದು, ಹಲವು ತಿರುವು ಪಡೆದುಕೊಳ್ಳುತ್ತಿದೆ . ಇತ್ತೀಚೆಗೆ ಹಿಜಾಬ್ ಧರಿಸುವುದು ಮೂಲಭೂತ ಹಕ್ಕೆಂದು ವಾದ ಮಾಡಿ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು,
ಉಡುಪಿಯ ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿನಿ ಸಂವಿಧಾನದಡಿ ಧಾರ್ಮಿಕ ಹಕ್ಕುಗಳನ್ನು ನೀಡಲಾಗಿದೆ. ಹಿಜಾಬ್ ಧರಿಸುವುದೂ ಧಾರ್ಮಿಕ ಹಕ್ಕಿನ ಭಾಗ ಆಗಿದೆ. ಆದರೆ ಹಿಜಾಬ್ ಧರಿಸಲು ಕಾಲೇಜು ಅನುಮತಿ ನೀಡಿಲ್ಲ, ಆದ್ದರಿಂದ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಲು ಮನವಿ ಮಾಡಿದ್ದರು.
Vaccination : ಐದು ತಿಂಗಳ ಹಿಂದೆ ಸತ್ತ ಮಹಿಳೆಯ ಮೊಬೈಲ್ ಗೆ ಬಂತು ಕೋವಿಡ್ ಲಸಿಕೆ ಹಾಕಲಾಗಿದೆ ಎಂಬ ಸಂದೇಶ