ನವದೆಹಲಿ: ಕರ್ನಾಟಕ ಹೈಕೋರ್ಟ್ ಶಾಲಾ-ಕಾಲೇಜುಗಳಲ್ಲಿ ( School and College ) ಹಿಜಾಬ್ ಧರಿಸೋದಕ್ಕೆ ( Hijab Row ) ನಿಷೇಧ ಹೇರಿ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವಂತ ಮೇಲ್ಮನವಿಯ ಅರ್ಜಿಯನ್ನು, ಸುಪ್ರೀಂ ಕೋರ್ಟ್ ( Supreme Court ) ನ್ಯಾಯಪೀಠವು, ನಾಳೆ ಕೈಗೆತ್ತಿಕೊಳ್ಳಲಿದೆ. ಹೀಗಾಗಿ ರಾಜ್ಯದಲ್ಲಿ ಮತ್ತೆ ಹಿಜಾಬ್ ವಿವಾದ ಭುಗಿಲೇಳೋ ಸಾಧ್ಯತೆ ಇದೆ ಎನ್ನಲಾಗಿದೆ.
BIG NEWS: ಗೌರಿಗಣೇಶ ಚತುರ್ಥಿಗೂ ತಟ್ಟಿದ ಧರ್ಮ ದಂಗಲ್ ಬಿಸಿ: ಹಿಂದೂ ವರ್ತಕರಿಂದ ವಸ್ತು ಖರೀದಿಸುವಂತೆ ಅಭಿಯಾನ
ನಾಳೆ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಹೇಮಂತ್ ಗುಪ್ತಾ ಹಾಗೂ ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರನ್ನು ಒಳಗೊಂಡಂತ ದ್ವಿಸದಸ್ಯ ನ್ಯಾಯಪೀಠವು, ಹಿಜಾಬ್ ಧರಿಸುವುದರ ಮೇಲಿನ ನಿಷೇಧ ಪ್ರಶ್ನಿಸಿ, ಸಲ್ಲಿಸಲಾಗಿರುವಂತ ಅರ್ಜಿಯ ವಿಚಾರಣೆಯನ್ನು ನಡೆಸಲಿದೆ.
ಅಂದಹಾಗೇ ಶಾಲಾ-ಕಾಲೇಜುಗಳಲ್ಲಿ ಮಾರ್ಚ್ 15ರಂದು ಹಿಜಾಬ್ ಧರಿಸಲು ಅವಕಾಶ ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಅಲ್ಲದೇ ಶಿಕ್ಷಣ ಇಲಾಖೆಯಿಂದ ಶಾಲಾ-ಕಾಲೇಜು ಆವರಣದಲ್ಲಿ ಹಿಜಾಬ್ ಧರಿಸೋ ಸಂಬಂಧ ಹೊರಡಿಸಿದ್ದಂತ ಆದೇಶವನ್ನು ಎತ್ತಿ ಹಿಡಿದಿತ್ತು. ಈ ತೀರ್ಪು ಪ್ರಶ್ನಿಸಿ, ಸುಪ್ರೀಂ ಕೋರ್ಟ್ ಗೆ ವಿವಿಧ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆಯನ್ನು ನಾಳೆ ಕೈಗೊಳ್ಳಲಿದೆ.
ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್: ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ.?