ನವದೆಹಲಿ : ಇಂದು ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ನಡೆದ ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಗುಜರಾತ್ನಲ್ಲಿ ಸಾಂಪ್ರದಾಯಿಕವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸ್ಪರ್ಧೆ ನಡೆಯುತ್ತಿದ್ದರೂ, ಈ ಬಾರಿ ಆಮ್ ಆದ್ಮಿ ಪಕ್ಷ (ಎಎಪಿ) ಚುನಾವಣಾ ಅಖಾಡಕ್ಕೆ ಪ್ರವೇಶಿಸುವುದರೊಂದಿಗೆ ಇಲ್ಲಿ ತ್ರಿಕೋನ ಸ್ಪರ್ಧೆ ನಡೆದಿದೆ.
ಗುಜರಾತ್ ವಿಧಾನಸಭೆ ಚುನಾವಣೆಯ ಮತಗಳ ಎಣಿಕೆ ಈಗಾಗಲೇ ಶುರುವಾಗಿದ್ದು, ಆರಂಭಿಕ ಹಂತದಲ್ಲಿ ಬಿಜೆಪಿ 132 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ 43 ಕ್ಷೇತ್ರಗಳಲ್ಲಿ, ಆಪ್ ಆದ್ಮಿ ಪಕ್ಷ 6 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಇನ್ನು ಹಿಮಾಚಲ ಪ್ರದೇಶದಲ್ಲಿ ಮತಗಳ ಏಣಿಕೆಯಲ್ಲಿ ಬಿಜೆಪಿ 27 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ 29 ಕ್ಷೇತ್ರಗಳಲ್ಲಿ, ಆಮ್ ಆದ್ಮಿ ಪಾರ್ಟಿ 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.