ನವದೆಹಲಿ : ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಕೊರೊನಾ ಪಾಸಿಟಿವ್ ಆಗಿದೆ. ಅವರಿಗೆ ಈ ವರೆಗೆ ಯಾವುದೇ ಕೋವಿಡ್ ಲಕ್ಷಣಗಳು ಕಂಡು ಬಂದಿಲ್ಲ, ಮುನ್ನೆಚ್ಚರಿಕೆ ಕ್ರಮವಾಗಿ ಪ್ರತ್ಯೇಕ ವಾಸದಲ್ಲಿದ್ದಾರೆ ಎಂದು ತಿಳಿದು ಬಂದಿದೆ.
Himachal Pradesh Chief Minister Sukhvinder Singh Sukhu tests positive for #COVID19
(File photo) pic.twitter.com/aF1K8pxmgI
— ANI (@ANI) December 19, 2022
ಇಂದು ರಾಷ್ಟ್ರ ರಾಜಧಾನಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಮುನ್ನ ಭಾನುವಾರ ಕೋವಿಡ್ -19 ಸೋಂಕಿನ ಪರೀಕ್ಷೆಗೆ ಒಳಗಾಗಿದ್ದರು. ಈ ಬೆಳವಣಿಗೆ ಹಿನ್ನೆಲೆ ಅವರ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ