ಹಿಮಾಚಲ ಪ್ರದೇಶ: ಇಂದು ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಆರಂಭವಾಗಿದೆ.
ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಬೆಳಗ್ಗೆ 8 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 5ರವರೆಗೆ ನಡೆಯಲಿದೆ. 55 ಲಕ್ಷಕ್ಕೂ ಹೆಚ್ಚು ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಇದಕ್ಕಾಗಿ 7,881 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
Voting for 68 Assembly constituencies in Himachal Pradesh begins; fate of 412 candidates in the fray. #HimachalPradeshElection2022 pic.twitter.com/Lr0SN6PPn2
— ANI (@ANI) November 12, 2022
ರಾಜ್ಯದ ಎಲ್ಲಾ 68 ಸ್ಥಾನಗಳಿಗೆ 412 ಅಭ್ಯರ್ಥಿಗಳು ಸ್ಪರ್ಧಿಸಿದ್ದು, 55 ಲಕ್ಷ ಮತದಾರರು ರಾಜ್ಯ ವಿಧಾನ ಸಭೆಗೆ ಶಾಸಕರನ್ನು ಆಯ್ಕೆ ಮಾಡುವ ಹೊಣೆ ಹೊತ್ತಿದ್ದಾರೆ.
ಡಿಸೆಂಬರ್ 8 ರಂದು ಫಲಿತಾಂಶ ಹೊರಬೀಳಲಿದೆ.