ಮಂಗಳೂರು: ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಕಳೆದ ಜುಲೈ.26ರಂದು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ( Praveen Nettaru Murder Case ) ಹತ್ಯೆಗೈಯಲ್ಲಾಗಿತ್ತು. ಈ ಸಂಬಂಧ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣ ಸಂಬಂಧ ಪ್ರವೀಣ್ ಹತ್ಯಾ ಆರೋಪಿಯ ಸಹೋದರ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿರೋದಾಗಿ ತಿಳಿದು ಬಂದಿದೆ. ಈ ಕಾರಣದಿಂದಲೇ ಬೆಳ್ಳಾರೆಯ ಠಾಣೆ ಮುಂದೆ ಹಿಂದೂ ಕಾರ್ಯಕರ್ತರು ಬೆದರಿಕೆ ಹಾಕಿದಂತ ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದ್ದಂತ ಪ್ರವೀಣ್ ನೆಟ್ಟಾರು ಹತ್ಯೆಯಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ಶಫಿಕ್ ಬಂಧಿಸಲಾಗಿತ್ತು. ಈತನ ಸಹೋದರ ಸಫ್ರಿದ್ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ್ದಾನೆ ಎಂಬುದಾಗಿ ಆರೋಪಿಸಲಾಗಿದೆ.
ಆರೋಪಿ ಶಫಿಕ್ ಸಹೋದರ ಸಫ್ರಿದ್ ಹಿಂದೂ ಕಾರ್ಯಕ್ರತ ಪ್ರಶಾಂತ್ ರೈ ಎಂಬುವರಿಗೆ ಕರೆ ಮಾಡಿ, ಜೀವ ಬೆದರಿಕೆ ಹಾಕಲಾಗಿದೆ ಎಂಬುದಾಗಿ ಬೆಳ್ಳಾರೆ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಅಲ್ಲದೇ ಇಂದು ಸಫ್ರಿದ್ ಬಂಧಿಸುವಂತೆ ಆಗ್ರಹಿಸಿ, ಬೆಳ್ಳಾರೆ ಠಾಣೆಯ ಮುಂದೆ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ತಾಕತ್ತು ದಮ್ಮು ಹಾನಗಲ್ ಉಪ ಚುನಾವಣೆಯಲ್ಲಿ ಜನರೇ ಬೊಮ್ಮಾಯಿಗೆ ತೋರಿಸಿದ್ದಾರೆ – ರಮೇಶ್ ಬಾಬು