ಮಂಗಳೂರು: ರೌಡಿ ಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಮಂಗಳೂರಿನ ಬಜ್ಪೆ ಠಾಣೆಯ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ರೌಡಿ ಶೀಟರ್ ಮತ್ತು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ನಡು ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಮಂಗಳೂರಿನ ಬಜ್ಪೆ ಠಾಣೆಯ ಪೊಲೀಸರು ಕಳವಾರಿನ ಅಜರುದ್ದೀನ್ ಆಲಿಯಾಸ್ ಅಜರ್ ಆಲಿಯಾಸ್ ಅಜ್ಜು(29), ಬಜ್ಪೆ ನಿವಾಸಿ ಅಬ್ದುಲ್ ಖಾದರ್ ಆಲಿಯಾಸ್ ನೌಫಲ್(24), ವಾಮಂಜೂರಿನ ನೌಷದ್ ಆಲಿಯಾಸ್ ಚೊಟ್ಟೆ ನೌಷದ್(39) ಬಂಧಿಸಿದ್ದಾರೆ.
ಅಜರುದ್ದೀನ್ ವಿರುದ್ಧ ಈ ಹಿಂದೆಯೂ ಮೂರು ಪ್ರಕರಣಗಳು ದಾಖಲಾಗಿದ್ದವು. ಪಣಂಬೂರು, ಸುರತ್ಕಲ್, ಮುಲ್ಕಿ ಪೊಲೀಸರು ಠಾಣೆಯಲ್ಲಿ ಕೇಸ್ ಗಳಿವೆ. ಸುಹಾಸ್ ಶೆಟ್ಟಿ ಚಲನವಲನದ ಬಗ್ಗೆ ಮಾಹಿತಿ ನೀಡಿ ಹತ್ಯೆಗೆ ಈ ಆರೋಪಿಗಳು ಸಹಕರಿಸಿದ್ದರು.
ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಆರೋಪಿಗಳು ಕಾರಿನಲ್ಲಿ ಪಾರಿಯಾಗಲು ಅಬ್ದುಲ್ ಖಾದರ್ ಸಹಕರಿಸಿದ್ದನು. ಸುಹಾಸ್ ಹತ್ಯೆಗೆ ಉಳಿದ ಆರೋಪಿಗಳ ಜೊತೆಗೆ ನೌಷದ್ ಸಂಚು ರೂಪಿಸಿದ್ದನು. ನೌಷದ್ ವಿರುದ್ಧ ಕೊಲೆ, ಕೊಲೆ ಯತ್ನ, ದರೋಡೆ ಸೇರಿದಂತೆ 6 ಕೇಸ್ ಗಳಿದ್ದಾವೆ.