ಬೆಂಗಳೂರು: ಇಂದು ಬೆಂಗಳೂರಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದಂತ ಆರೋಪದಡಿ ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಬಂಧಿಸಲಾಗಿತ್ತು. ಆ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಅವರಿಗೆ ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ.
ಬೆಂಗಳೂರಿನ ಕಾಟನ್ ಪೇಟೆ ಠಾಣೆಯ ಪೊಲೀಸರು ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದಂತ ಆರೋಪದಡಿ ಬಂಧಿಸಿದ್ದರು. ಆ ಬಳಿಕ ಅವರನ್ನು ಬೆಂಗಳೂರಿನ 5ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಮೂರ್ತಿಗಳು ಪುನೀತ್ ಕೆರೆಹಳ್ಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಅಲ್ಲದೇ ಸೋಮವಾರದಂದು ಜಾಮೀನು ಅರ್ಜಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಹೀಗಾಗಿ ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ಜೈಲುಪಾಲಾಗಿದ್ದಾರೆ.
ಚಿತ್ರದುರ್ಗ: ಸಾಂಪ್ರದಾಯಿಕ ಆಚರಣೆಗಳು ಹಳೇ ಕಾಲದ ಆಭರಣವಿದ್ದಂತೆ- ಡಾ.ಶಿವಕುಮಾರ್
SSC CGL 2024 : ಉದ್ಯೋಗಾಕಾಂಕ್ಷಿಗಳೇ ನಿಮಗಿದು ಲಾಸ್ಟ್ ಚಾನ್ಸ್ ; 17000+ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ!