ಕೊಡಗು: ಕಾವೇರಿ ಮಾತೆ, ಕೊಡವ ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿಯನ್ನು ಪೋಲಿಸಿರು ಬಂಧಿಸಿರುವ ಘಟನೆ ಕೊಡಗಿನಲ್ಲಿ ನಡೆದಿದೆ.
ಕೊಡಗಿನ ಪೊಲೀಸರು ಅಪರಾಧಿಯನ್ನು ಪತ್ತೆ ಹಚ್ಚುವ ಉದ್ದೇಶದಿಂದ ಫೇಸ್ ಬುಕ್ ಮುಂಬೈ ಕಚೇರಿ ಬಳಿಕ ಕ್ಯಾಲಿಫೋರ್ನಿಯಾದಲ್ಲಿರುವ ಮುಖ್ಯ ಕಚೇರಿ ಸಂಪರ್ಕಿಸಿ ನೈಜ ಅಪರಾಧಿಯನ್ನು ಬಂಧಿಸಿದ್ದಾರೆ.
ಬಂಧಿತನನ್ನು ವಿರಾಜಪೇಟೆ ತಾಲೂಕಿನ ಕೆದಮುಳ್ಳೂರು ನಿವಾಸಿ ದಿವಿನ್ ದೇವಯ್ಯ ಅಂತ ಗುರುತಿಸಲಾಗಿದೆ. ಈ ತ ಈತ ಮುಸ್ಲಿಂ ಯುವಕನ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಕೊಡವ ಜನತೆಯ ಕುಲ ದೇವರಾಗಿರುವ ಕಾವೇರಿ ಮಾತೆ ಹಾಗೂ ಕೊಡವ ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪ ಕೇಳಿ ಬಂದಿದೆ.
