Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ!

BREAKING : ಸರ್ಕಾರಡದ ಫ್ರೀ ಬಸ್ ನಿಂದ ಬ್ಯುಸಿನೆಸ್ ಲಾಸ್ : ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು ಬಟ್ಟೆ ವ್ಯಾಪಾರಿ ನೇಣಿಗೆ ಶರಣು!

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಭೀತಿ ಹಿನ್ನೆಲೆ : ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಶಿಫ್ಟ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಖಾಲಿ ಇರುವ 56,000 ಹುದ್ದೆಯನ್ನು ಭರ್ತಿ ಮಾಡಲು ಐತಿಹಾಸಿಕ ನಿರ್ಧಾರ: ಸಚಿವ ಮಧು ಬಂಗಾರಪ್ಪ
KARNATAKA

ರಾಜ್ಯದಲ್ಲಿ ಖಾಲಿ ಇರುವ 56,000 ಹುದ್ದೆಯನ್ನು ಭರ್ತಿ ಮಾಡಲು ಐತಿಹಾಸಿಕ ನಿರ್ಧಾರ: ಸಚಿವ ಮಧು ಬಂಗಾರಪ್ಪ

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ : ರಾಜ್ಯದಲ್ಲಿ 56 ಸಾವಿರ ಹುದ್ದೆಯನ್ನು ಭರ್ತಿ ಮಾಡುತ್ತಿರುವುದು ಐತಿಹಾಸಿಕ ನಿರ್ಧಾರ. ದೇಶದ ಯಾವ ರಾಜ್ಯದಲ್ಲೂ ಇಷ್ಟು ದೊಡ್ಡ ಪ್ರಮಾಣದ ನೇಮಕಾತಿ ನಡೆದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಸೋಮವಾರದಂದು ತಮ್ಮ ಹುಟ್ಟು ಹಬ್ಬದ ನಿಮಿತ್ತ ಶಿವಮೊಗ್ಗ ಜಿಲ್ಲೆಯ ಸಾಗರದ ಜೋಸೆಫ್ ನಗರದಲ್ಲಿರುವ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಮನೆಗೆ ಭೇಟಿ ನೀಡಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಮೀಸಲಾತಿ ನಿಗಧಿಪಡಿಸದೆ ನೇಮಕಾತಿ ಮಾಡಿಕೊಂಡರೆ ಕೆಲವು ವರ್ಗಗಳಿಗೆ ಅನ್ಯಾಯವಾಗುತ್ತದೆ ಎಂದು ಹೇಳಿದರು.

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ಮಾಡಿದ್ದಾರೆ. ನಮ್ಮ ಇಲಾಖೆಯಲ್ಲಿ ಹೆಚ್ಚು ಜನರು ಉದ್ಯೋಗಾಕಾಂಕ್ಷಿಗಳಿದ್ದಾರೆ. ವಿರೋಧ ಪಕ್ಷದ ನಾಯಕ ಅಶೋಕ್ ಪುಗಸಟ್ಟೆ ಭಾಷಣ ಮಾಡುತ್ತಾರೆ. 2 ಲಕ್ಷ ಉದ್ಯೋಗ ಭರ್ತಿ ಮಾಡಬೇಕು ಎಂದು ಹೇಳಿಕೆ ನೀಡುತ್ತಾರೆ. ಅವರೇನು ಕತ್ತೆ ಕಾಯುತ್ತಿದ್ದರಾ, ಮೂರು ಜನ ಉಪಮುಖ್ಯಮಂತ್ರಿಗಳು ಹಿಂದಿನ ಸರ್ಕಾರದಲ್ಲಿ ಇದ್ದರು. ಏನು ಸೆಗಣಿ ತಿನ್ನುತ್ತಿದ್ದರಾ ಎಂದು ಪ್ರಶ್ನಿಸಿದ ಸಚಿವರು, 56ಸಾವಿರ ಜನರನ್ನು ಏಕಕಾಲಕ್ಕೆ ಭರ್ತಿ ಮಾಡುತ್ತಿರುವುದು ಇತಿಹಾಸ. ನಮ್ಮ ಮೂರು ವರ್ಷದಲ್ಲಿ ಅಷ್ಟು ಜನ ನಿವೃತ್ತಿಯೇ ಆಗಿಲ್ಲ. ಓದಿರುವ ಮಕ್ಕಳಿಗೆ ಉದ್ಯೋಗ ಕೊಡುವುದು ನಮ್ಮ ಜವಾಬ್ದಾರಿ. ಮುಂದೆಯೂ ಇನ್ನೊಂದು ಹಂತದಲ್ಲಿ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ ಎಂದು ಹೇಳಿದರು.

ಶರಾವತಿ ಮುಳುಗಡೆ ಸಂತ್ರಸ್ತರ ಹೆಸರಿನಲ್ಲಿ ಹೋರಾಟ ಮಾಡುತ್ತಿರುವವರ ಕೈನಲ್ಲಿಯೆ ಹಿಂದೆ ಕೇಂದ್ರ ಮತ್ತು ರಾಜ್ಯದ ಅಧಿಕಾರ ಇತ್ತು. ಅರ್ಜಿಗಳನ್ನು ವಜಾ ಮಾಡಿ ಈಗ ಹೋರಾಟ ಎನ್ನುತ್ತಿದ್ದಾರೆ. ಶರಾವತಿ ಮುಳುಗಡೆ ಸಂತ್ರಸ್ತರ ಪರ ನಾವು ಹೋರಾಟ ಮಾಡುತ್ತೇವೆ. ಅಂತಿಮವಾಗಿ ಕಾನೂನು ಏನು ಹೇಳುತ್ತದೆಯೋ ಅದನ್ನೆ ನಾವು ಮಾಡುವುದು ಅನಿವಾರ್ಯ. ಅಧಿಕಾರಕ್ಕೆ ಬರುವುದಕ್ಕಿಂತ ಮೊದಲು ನಾವು ಕಾಗೋಡು ತಿಮ್ಮಪ್ಪ ಅವರ ಎದುರು ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಹಕ್ಕು ಕೊಡುತ್ತೇವೆ ಎಂದು ಮಾತು ಕೊಟ್ಟಿದ್ದೇವೆ. ಅದನ್ನು ಖಂಡಿತಾ ಈಡೇರಿಸುತ್ತೇವೆ. ಈಗಾಗಲೆ ನ್ಯಾಯಾಲಯ ಉತ್ತಮವಾಗಿ ಸ್ಪಂದಿಸುತ್ತಿದೆ, ಕೇಂದ್ರ ಸರ್ಕಾರ ಸಕಾರಾತ್ಮಕವಾಗಿದೆ. ಶರಾವತಿ, ಚಕ್ರ, ವರಾಹಿ ಎಲ್ಲರಿಗೂ ನ್ಯಾಯ ಸಿಗುತ್ತದೆ. ಈಗ ಭಾಷಣ ಹೊಡೆಯುವವರು ಹಿಂದೆ ಅಧಿಕಾರದಲ್ಲಿದ್ದಾಗ ಪರಿಭಾವಿತ ಅರಣ್ಯ ಕಾಯ್ದೆ ಜಾರಿಗೆ ತಂದಿದ್ದರು. ಡೀಮ್ಡ್ ಫಾರೆಸ್ಟ್ ಕಾಯ್ದೆ ತಿದ್ದುಪಡಿಗೆ ಸಹ ಅವಕಾಶ ಸಿಕ್ಕಿದೆ. ನ್ಯಾಯಾಲಯ ಆದೇಶ ಹೊರತುಪಡಿಸಿ ಇತರೆ ಸಂದರ್ಭದಲ್ಲಿ ರೈತರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಬಜೆಟ್‌ನಲ್ಲಿ ಜಿಲ್ಲೆಗೆ ಬೇರೆಬೇರೆ ಯೋಜನೆಗೆ ಪ್ರಸ್ತಾವನೆ ಸಲ್ಲಿಸಿದೆ. ಇದರ ಜೊತೆಗೆ ಬಜೆಟ್ ಹೊರತುಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏಪ್ರಿಲ್ ತಿಂಗಳಿನಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ ರಾಜ್ಯಮಟ್ಟದ ಕಾರ್ಯಕ್ರಮ ಉದ್ಘಾಟನೆಗೆ ಶಿವಮೊಗ್ಗಕ್ಕೆ ಆಗಮಿಸುತ್ತಾರೆ. ಆಗ ಜಿಲ್ಲೆಗೆ ಬೇಕಾದ ಒಂದಷ್ಟು ಯೋಜನೆ ಅವರೆ ಘೋಷಣೆ ಮಾಡುತ್ತಾರೆ. ಒಂದು ಲಕ್ಷ ಜನರಿಗೆ ಹಕ್ಕುಪತ್ರ ನೀಡಿದ ವಿನೂತನ ಕಾರ್ಯಕ್ರಮ ನಮ್ಮ ಸರ್ಕಾರ ಮಾಡಿದೆ. ಕಾಗೋಡು ತಿಮ್ಮಪ್ಪ ಅವರ ಭೂಮಿ ನೀಡಬೇಕು ಎನ್ನುವ ಕನಸು ನಮ್ಮ ಸರ್ಕಾರ ಸಾಕಾರಗೊಳಿಸಿದೆ. ಕಾಗೋಡು ಅವರ ಅನಾರೋಗ್ಯ ಹಿನ್ನೆಲೆಯಲ್ಲಿ ಅವರನ್ನು ಕಾರ್ಯಕ್ರಮಕ್ಕೆ ಕರೆದುಕೊಂಡು ಹೋಗಲು ಆಗಲಿಲ್ಲ. ನಮ್ಮ ಕ್ಷೇತ್ರದಲ್ಲಿ ಇನ್ನು ಒಂದೆರಡು ತಿಂಗಳಿನಲ್ಲಿ ಸುಮಾರು 5ಸಾವಿರ ಜನರಿಗೆ ಹಕ್ಕುಪತ್ರ ಕೊಡುವ ಕಾರ್ಯಕ್ರಮ ಕಾಗೋಡು ನೇತೃತ್ವದಲ್ಲಿ ಮಾಡಲಾಗುತ್ತದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಸಚಿವ ಮಧು ಬಂಗಾರಪ್ಪ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಕಾಗೋಡು ತಿಮ್ಮಪ್ಪ ಅಭಿನಂದಿಸಿದರು. ಈ ಸಂದರ್ಭದಲ್ಲಿ ದೀಪಾ ಕಾಗೋಡು, ಅನಿತಾ ಕುಮಾರಿ, ಕಲಸೆ ಚಂದ್ರಪ್ಪ, ಗಿರೀಶ್ ಕೋವಿ, ಲೋಕೇಶ್ ಗಾಳಿಪುರ, ತಾರಾಮೂರ್ತಿ, ಮಹಾಬಲೇಶ್ವರ ಕುಗ್ವೆ, ಡಿ.ದಿನೇಶ್, ನಾರಾಯಣ ಅರಮನೆಕೇರಿ ಇನ್ನಿತರರು ಹಾಜರಿದ್ದರು.

ಸಿಗಂಧೂರು ಸೇತುವೆ ಬಳಿ ರಸ್ತೆ ತಡೆ ನಡೆಸಿ ರೈತರು ಪ್ರತಿಭಟನೆ: ಜನಪ್ರತಿನಿಧಿಗಳಿಗೆ ತೀ.ನಾ.ಶ್ರೀನಿವಾಸ್ ಈ ಸವಾಲು

BIG NEWS: ರಾಜ್ಯಾಧ್ಯಂತ ಇ-ಸ್ವತ್ತು ತಂತ್ರಾಂಶದಡಿ 1,14,907 ಅರ್ಜಿಗಳನ್ನು ಅನುಮೋದನೆ

Share. Facebook Twitter LinkedIn WhatsApp Email

Related Posts

BREAKING : ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ!

1 Min Read

BREAKING : ಸರ್ಕಾರಡದ ಫ್ರೀ ಬಸ್ ನಿಂದ ಬ್ಯುಸಿನೆಸ್ ಲಾಸ್ : ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು ಬಟ್ಟೆ ವ್ಯಾಪಾರಿ ನೇಣಿಗೆ ಶರಣು!

1 Min Read

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಭೀತಿ ಹಿನ್ನೆಲೆ : ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಶಿಫ್ಟ್!

1 Min Read
Recent News

BREAKING : ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ!

BREAKING : ಸರ್ಕಾರಡದ ಫ್ರೀ ಬಸ್ ನಿಂದ ಬ್ಯುಸಿನೆಸ್ ಲಾಸ್ : ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು ಬಟ್ಟೆ ವ್ಯಾಪಾರಿ ನೇಣಿಗೆ ಶರಣು!

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಭೀತಿ ಹಿನ್ನೆಲೆ : ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಶಿಫ್ಟ್!

BREAKING : ಜೈಪುರದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ : ಮೂವರು ಸಜೀವ ದಹನ!

State News
KARNATAKA

BREAKING : ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ!

By ಸುರೇಶ್‌ KARNATAKA 1 Min Read

ಬೆಂಗಳೂರು: ಕರ್ನಾಟಕದಿಂದ ತೆರವಾಗಿದ್ದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಭಾರಿ ರಾಜಕೀಯ ಕುತೂಹಲಕ್ಕೆ ತೆರೆ ಬಿದ್ದಿದೆ. ಈ ನಾಲ್ಕೂ…

BREAKING : ಸರ್ಕಾರಡದ ಫ್ರೀ ಬಸ್ ನಿಂದ ಬ್ಯುಸಿನೆಸ್ ಲಾಸ್ : ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು ಬಟ್ಟೆ ವ್ಯಾಪಾರಿ ನೇಣಿಗೆ ಶರಣು!

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಭೀತಿ ಹಿನ್ನೆಲೆ : ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಶಿಫ್ಟ್!

ನಿಮ್ಮ ಮನೆಯ `ಸ್ಮಾರ್ಟ್ ಟಿವಿ’ ತಿಂಗಳಿಗೆ ಎಷ್ಟು ಕರೆಂಟ್ ಬಳಸುತ್ತೆ ಗೊತ್ತಾ? ಇಲ್ಲಿದೆ ವಿದ್ಯುತ್ ಉಳಿತಾಯದ ಟಿಪ್ಸ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.