ಕೋಲ್ಕತ್ತಾ:ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು (ಬಿಜೆಪಿ) ಮೊದಲ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವ ಮೂಲಕ ಇತಿಹಾಸ ನಿರ್ಮಿಸಿದೆ. ಈ ಅಭೂತಪೂರ್ವ ಯಶಸ್ಸನ್ನು ಶ್ಲಾಘಿಸಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶೇಷ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಈ ಗೆಲುವನ್ನು “ಚಾರಿತ್ರಿಕ ಮತ್ತು ನಿರ್ಣಾಯಕ” ಎಂದು ಟ್ರಂಪ್ ಬಣ್ಣಿಸಿದ್ದಾರೆ.
ಶ್ವೇತಭವನದ ವಕ್ತಾರರು ಈ ಕುರಿತು ಮಾಹಿತಿ ನೀಡಿದ್ದು, “ಭಾರತವು ಮೋದಿಯವರಂತಹ ನಾಯಕನನ್ನು ಹೊಂದಲು ಅದೃಷ್ಟ ಮಾಡಿದೆ” ಎಂದು ಟ್ರಂಪ್ ಹೇಳಿರುವುದಾಗಿ ತಿಳಿಸಿದ್ದಾರೆ.ಪಶ್ಚಿಮ ಬಂಗಾಳದಲ್ಲಿ ದಶಕಗಳ ಕಾಲ ಆಳ್ವಿಕೆ ನಡೆಸಿದ್ದ ಪ್ರಾದೇಶಿಕ ಪಕ್ಷಗಳ ಭದ್ರಕೋಟೆಯನ್ನು ಭೇದಿಸಿರುವ ಬಿಜೆಪಿ, ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಸರ್ಕಾರ ರಚಿಸಲು ಸಜ್ಜಾಗಿದೆ.
ಈಫಲಿತಾಂಶದೊಂದಿಗೆ ಪಶ್ಚಿಮ ಬಂಗಾಳದಲ್ಲಿ ಕಳೆದ 15 ವರ್ಷಗಳಿಂದ ಮುಂದುವರಿದಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಆಡಳಿತ ಅಂತ್ಯಗೊಂಡಿದೆ.
ಒಟ್ಟು 294 ಸ್ಥಾನಗಳ ಪೈಕಿ ಬಿಜೆಪಿ 207 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತದೊಂದಿಗೆ ಬೀಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭವಾನಿಪುರ ಕ್ಷೇತ್ರದಲ್ಲಿ ಬಿಜೆಪಿಯ ಸುವೇಂದು ಅಧಿಕಾರಿಯವರ ವಿರುದ್ಧ ಸೋಲನುಭವಿಸಿರುವುದು ಈ ಚುನಾವಣೆಯ ದೊಡ್ಡ ಅಚ್ಚರಿಯಾಗಿದೆ.








