ಶಿವಮೊಗ್ಗ: ನಿನ್ನೆಯಷ್ಟೇ ರಾಜ್ಯದ ರಾಜಧಾನಿ ಬೆಂಗಳೂರಲ್ಲಿ ಇಬ್ಬರಿಗೆ ಹೆಚ್ ಎಂ ಪಿ ವಿ ವೈರಲ್ ದೃಢಪಟ್ಟಿತ್ತು. ಇದೀಗ ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ಆರ್ಭಟ ಮುಂದುವರೆದಿದ್ದು, ಶಿವಮೊಗ್ಗದಲ್ಲಿ ಮೂವರು ಮಕ್ಕಳಿಗೆ ಸೋಂಕಿಗೆ ಒಳಗಾಗಿರುವುದಾಗಿ ಪತ್ತೆಯಾಗಿದೆ.
ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಂತ ಮೂವರು ಮಕ್ಕಳಲ್ಲಿ ಹೆಚ್ ಎಂ ಪಿ ವಿ ವೈರಸ್ ಸೋಂಕು ಕಂಡು ಬಂದಿದೆ ಎನ್ನಲಾಗುತ್ತಿದೆ. ಈ ಸಂಬಂಧ ವೈದ್ಯ ಧರನಂಜಯ್ ಸರ್ಜಿ ಮಾಹಿತಿ ನೀಡಿದ್ದು, ಆರೋ ತಿಂಗಳಿನಿಂದ ಎರಡು ವರ್ಷದೊಳಗಿನ ಮೂವರು ಮಕ್ಕಳಲ್ಲಿ ಸೋಂಕು ದೃಢಪಟ್ಟಿದೆ. ಮಕ್ಕಳಲ್ಲಿ ಉಸಿರಾಟದ ಸಮಸ್ಯೆ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾಗಿ ತಿಳಿಸಿದ್ದಾರೆ.
ಕೋವಿಡ್ ಸೋಂಕಿನ ಶಂಕೆಯ ಹಿನ್ನಲೆಯಲ್ಲಿ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ಪರೀಕ್ಷೆಯಲ್ಲಿ ಮೂವರು ಮಕ್ಕಳು ಹೆಚ್ ಎಂ ಪಿ ವಿ ವೈರಸ್ ಸೋಂಕಿಗೆ ಒಳಗಾಗಿರುವುದು ದೃಢಪಟ್ಟಿದೆ. ಸೋಂಕಿಗೆ ಚಿಕಿತ್ಸೆ ನೀಡಲಾಗಿದೆ. ಮಕ್ಕಳು ಗುಣಮುಖ ಕೂಡ ಆಗಿದ್ದಾಗಿ ತಿಳಿಸಿದ್ದಾರೆ.
BREAKING: ಜ.16ರಂದು ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting
ಬಿ.ಎಸ್.ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಪ್ರಕರಣ: ಕಾನೂನು ಕ್ರಮಕ್ಕೆ ಸಂತ್ರಸ್ತೆಯ ಕುಟುಂಬಸ್ಥರ ಆಗ್ರಹ