ಸುಭಾಷಿತ :

Monday, February 24 , 2020 2:55 AM

ಹೊಬರ್ಟ್ ಇಂಟರ್ ನ್ಯಾಷನಲ್ ಟೂರ್ನಿ : ಡಬಲ್ಸ್ ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಸಾನಿಯಾ ಮಿರ್ಜಾ


Saturday, January 18th, 2020 12:48 pm

ನವದೆಹಲಿ : ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರು ಹೊಬರ್ಟ್ ಇಂಟರ್ ನ್ಯಾಷನಲ್ ಟೆನಿಸ್ ಟೂರ್ನಿಯಲ್ಲಿ ಉಕ್ರೈನ್ ನ ಜೊತೆಗಾರ್ತಿ ನದಿಯಾ ಕಿಚ್ನಾಕ್ ಅವರೊಂದಿಗೆ ಮಹಿಳೆಯರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.

ಇಂದು ನಡೆದ ಡಬಲ್ಸ್ ಫೈನಲ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ತೋರಿದ ಸಾನಿಯಾ ಮಿರ್ಜಾ ಹಾಗೂ ನದಿಯಾ ಕಿಚ್ನಾಕ್ ಜೋಡಿಯು ಚೀನಾದ ಝಾಂಗ್ ಶುಯಿ ಮತ್ತು ಪೆಂಗ್ ಶುಯಿ ಜೋಡಿಯ ವಿರುದ್ಧ 6-4, 6-4 ಅಂತರದಲ್ಲಿ ನೇರ ಸೆಟ್ ಗಳಿಂದ ಗೆಲುವು ಸಾಧಿಸುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ಈ ಮೂಲಕ ಸಾನಿಯಾ ಮಿರ್ಜಾ 2017 ರ ಬಳಿಕ ಆಡಿದ ಮೊದಲ ಟೂರ್ನಿಯಲ್ಲೇ ಗೆಲುವಿನ ಆರಂಭ ಕಂಡಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Health
Sandalwood
Food
Beauty Tips
Astrology
Cricket Score
Poll Questions