Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

2026–27ನೇ ಸಾಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಮೊದಲ ಕಂತಿನ ಅನುದಾನ ಬಿಡುಗಡೆ

20/04/2026 9:28 PM

ರಾಹುಲ್‌ ಗಾಂಧಿ ಪೌರತ್ವ ಪ್ರಕರಣ: ಅರ್ಜಿದಾರನ ‘ಅಸಭ್ಯ’ ಪೋಸ್ಟ್‌ಗೆ ನ್ಯಾಯಾಧೀಶರ ಕೆಂಡಾಮಂಡಲ!

20/04/2026 9:21 PM

ಕರ್ನಾಟಕ ಮಾದರಿಯಲ್ಲಿ ತಮಿಳುನಾಡಿನ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ಹಣ: ಡಿಸಿಎಂ ಡಿ.ಕೆ.ಶಿವಕುಮಾರ್

20/04/2026 9:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಒದ್ದು ಕಿತ್ತುಕೊಳ್ಳುವುದು ನನ್ನ ಎಕ್ಸ್ ಪೀರಿಯನ್ಸ್ ಅಲ್ಲ : ಡಿಕೆ ಶಿವಕುಮಾರ್ ಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ತಿರುಗೇಟು
KARNATAKA

ಒದ್ದು ಕಿತ್ತುಕೊಳ್ಳುವುದು ನನ್ನ ಎಕ್ಸ್ ಪೀರಿಯನ್ಸ್ ಅಲ್ಲ : ಡಿಕೆ ಶಿವಕುಮಾರ್ ಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ತಿರುಗೇಟು

By kannadanewsnow0509/01/2026 11:28 AM

ಬೆಂಗಳೂರು : ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ನಡುವೆ ಇದೀಗ ವಾಕ್ಸಮರ ನಡೆದಿದ್ದು, ಕೊಳ್ಳೆ, ಸುಲಿಗೆ, ಬೇಲಿ, ಚದರಡಿ, ಕಮಿಷನ್, ಫಿಕ್ಸಿಂಗ್, ಒದ್ದು ಕಿತ್ತುಕೊಳ್ಳುವುದು ನನ್ನ ಎಕ್ಸ್​ಪೀರಿಯನ್ಸ್ ಅಲ್ಲ ಎಂದು ಡಿಸಿಎಂ ಡಿಕೆಶಿ ಅವರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಟ್ವೀಟ್ ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ರವರೇ ನಮ್ಮ ವಿಲೀನದ ಚಿಂತೆ ಪಕ್ಕಕ್ಕೆ ಇಡಿ. ನನ್ನ ಮತ್ತು ನಿಮ್ಮ ಆಡಳಿತಾನುಭವದ ಬಗ್ಗೆ ಮಾತನಾಡೋಣ. ನಾನು ಎರಡು ಸಣ್ಣ ಅವಧಿಗೆ ಮುಖ್ಯಮಂತ್ರಿ, ಅಲ್ಪ ಅವಧಿಗೆ ಪ್ರತಿಪಕ್ಷ ನಾಯಕ. ಈಗ ಕೇಂದ್ರ ಮಂತ್ರಿ. ನೀವೂ ಸುದೀರ್ಘ ಅವಧಿಗೆ ಶಾಸಕ, ಅನೇಕ ಬಾರಿ ಮಂತ್ರಿ. ಈಗ ಮಂತ್ರಿ ಉಪ ಮುಖ್ಯಮಂತ್ರಿ ನಮ್ಮಿಬ್ಬರ ಆಡಳಿತಾನುಭವದ ಬಗ್ಗೆ ನೀವು ಹೇಳುವುದಲ್ಲ, ಜನರನ್ನೇ ಕೇಳಬೇಕು..

ಕೊಳ್ಳೆ, ಸುಲಿಗೆ, ಬೇಲಿ, ಚದರಡಿ, ಕಮಿಷನ್, ಫಿಕ್ಸಿಂಗ್, ಒದ್ದು ಕಿತ್ತುಕೊಳ್ಳುವುದು ನನ್ನ ಎಕ್ಸ್ ಪೀರಿಯನ್ಸ್ ಅಲ್ಲಾ ಡಿಕೆಶಿರವರೇ.. ಏನೋ.. ಜನರ ಆಶೀರ್ವಾದ ಮತ್ತು ದೇವರ ದಯೆಯಿಂದ ಸಿಕ್ಕಿದ ಅವಕಾಶದಲ್ಲಿ ಜನರಿಗೆ ಕೈಲಾದ ಸಹಾಯ ಮಾಡುವ ಹುಲು ರಾಜಕಾರಣಿ ನಾನಷ್ಟೇ. ನಿಮಗೆ ಸಿದ್ಧಿಸಿರುವ ಅಂತಹ ಭಾರೀ ಅನುಭವ ನನಗಿಲ್ಲ.. ವಿನಮ್ರವಾಗಿ ಒಪ್ಪಿಕೊಳ್ಳುವೆ. ನಿಮಗೆ ಭೂ ಕಬ್ಜ, ಒತ್ತುವರಿ ಕರತಲಾಮಲಕ. ಅದೇ ರೀತಿ ಮತ್ತೊಬ್ಬ ಸಚಿವರ ಖಾತೆಯನ್ನು ಒತ್ತುವರಿ ಮಾಡುವುದರಲ್ಲಿಯೂ ನೀವು ನಿಸ್ಸೀಮರು. ಅದನ್ನಷ್ಟೇ ನಾನು ಹೇಳಿದ್ದು..

ತಾವು ಡಿಸಿಎಂ ಆಗಿರಬಹುದು. ಆದರೆ ಮಂತ್ರಿ ಪದವಿಗೆ ಇರುವಷ್ಟೇ ಶಿಷ್ಟಾಚಾರ, ಅಧಿಕಾರ ವ್ಯಾಪ್ತಿ ಆ ಹುದ್ದೆಗಿದೆ ಎನ್ನುವುದು ಗೊತ್ತಿಲ್ಲವೇ? ಅದಕ್ಕೇನು ಎಕ್ಸ್’ಟ್ರಾ ಕೊಂಬು, ಕೋಡು ಇರಲ್ಲ. ಇರಲಿ ಎಂದು ತಾವು ಸಿಕ್ಕಿಸಿಕೊಳ್ಳೋದಕ್ಕೂ ಬರಲ್ಲ. ನಿಮ್ಮ ಎಕ್ಸ್’ಪೀರಿಯನ್ಸ್ ಗೆ ಈ ಸಣ್ಣ ವಿಷಯವೂ ತಟ್ಟಲಿಲ್ಲವೇ ಮಿಸ್ಟರ್ ಡಿಕೆಶಿ ಅವರೇ!!??

ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆಯನ್ನು ಗೃಹ ಸಚಿವರೇ ನಡೆಸಬೇಕಿತ್ತು. ಅದು ಅವರ ಅಧಿಕಾರ ವ್ಯಾಪ್ತಿ. ಅವರು ಬಿಟ್ಟರೆ ಮುಖ್ಯಮಂತ್ರಿಗಳು ಅಂಥ ಸಭೆ ನಡೆಸಬಹುದು. ನೀವು ಸಭೆ ನಡೆಸಿದ್ದು ಶಿಷ್ಟಾಚಾರ, ಅಧಿಕಾರದ ಸ್ಪಷ್ಟ ಉಲ್ಲಂಘನೆ. ಇದನ್ನು ಆಡಳಿತಾನುಭವ, ಸೀನಿಯಾರಿಟಿ ಎಂದು ಬೆನ್ನು ತಟ್ಟಿಕೊಳ್ಳುತ್ತೀರಾ?

ಹೋಗಲಿ, ನೀವು ಮೀಟಿಂಗ್ ಮಾಡಿ ಎಂದು ಗೃಹ ಸಚಿವರು, ಸಿಎಂ ಅವರು ಹೇಳಿದ್ದರಾ? ಇಲ್ಲವಲ್ಲ. ಅದಕ್ಕೇ ನಾನು ಹೇಳಿದ್ದು; ಅವರೇನು ಹೆಬ್ಬೆಟ್ಟು ಗೃಹ ಮಂತ್ರಿಗಳಾ? ಅಥವಾ ರಬ್ಬರ್ ಸ್ಟ್ಯಾಂಪ್ ಗೃಹ ಮಂತ್ರಿಗಳಾ? ಎಂದು. ಒಬ್ಬ ಹಿರಿಯ ಮಂತ್ರಿಯ ಖಾತೆಯನ್ನು ನೀವು ಹೀಗೆ ಅಕ್ರಮವಾಗಿ ಒತ್ತುವರಿ ಮಾಡುವುದಕ್ಕೆ ಸಂವಿಧಾನದಲ್ಲಿ ವಿಶೇಷ ತಿದ್ದುಪಡಿ ಏನನ್ನಾದರೂ ಮಾಡಿಸಿದ್ದೀರ?
ನಿಮ್ಮದು ಭಾರೀ ಅನುಭವ, ಸಿಕ್ಕಾಪಟ್ಟೆ ಸೀನಿಯಾರಿಟಿ!! ಇಂಥ ಸಣ್ಣ ವಿಷಯ ನಿಮಗೇಕೆ ತಿಳಿಯಲಿಲ್ಲ ಮಿಸ್ಟರ್ ಡಿಕೆಶಿ ಅವರೇ? ಎಂದು ವಾಗ್ದಾಳಿ ನಡೆಸಿದ್ದಾರೆ.

ಡಿಸಿಎಂ @DKShivakumar ರವರೇ..
ನಮ್ಮ ವಿಲೀನದ ಚಿಂತೆ ಪಕ್ಕಕ್ಕೆ ಇಡಿ. ನನ್ನ ಮತ್ತು ನಿಮ್ಮ ಆಡಳಿತಾನುಭವದ ಬಗ್ಗೆ ಮಾತನಾಡೋಣ.

ನಾನು ಎರಡು ಸಣ್ಣ ಅವಧಿಗೆ ಮುಖ್ಯಮಂತ್ರಿ, ಅಲ್ಪ ಅವಧಿಗೆ ಪ್ರತಿಪಕ್ಷ ನಾಯಕ. ಈಗ ಕೇಂದ್ರ ಮಂತ್ರಿ.

ನೀವೂ ಸುದೀರ್ಘ ಅವಧಿಗೆ ಶಾಸಕ, ಅನೇಕ ಬಾರಿ ಮಂತ್ರಿ. ಈಗ ಮಂತ್ರಿ @ ಉಪ ಮುಖ್ಯಮಂತ್ರಿ!

ನಮ್ಮಿಬ್ಬರ…

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) January 9, 2026

Share. Facebook Twitter LinkedIn WhatsApp Email

Related Posts

2026–27ನೇ ಸಾಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಮೊದಲ ಕಂತಿನ ಅನುದಾನ ಬಿಡುಗಡೆ

20/04/2026 9:28 PM1 Min Read

ಕರ್ನಾಟಕ ಮಾದರಿಯಲ್ಲಿ ತಮಿಳುನಾಡಿನ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ಹಣ: ಡಿಸಿಎಂ ಡಿ.ಕೆ.ಶಿವಕುಮಾರ್

20/04/2026 9:21 PM2 Mins Read

ಸಿಇಟಿ ಪರೀಕ್ಷೆ 2026: ಕೆಇಎಯಿಂದ ವಸ್ತ್ರಸಂಹಿತೆ ಜಾರಿ, ಕಿವಿಯೋಲೆ, ಉಂಗುರಕ್ಕೂ ನಿರ್ಬಂಧ; ಮಂಗಳಸೂತ್ರಕ್ಕೆ ವಿನಾಯಿತಿ

20/04/2026 9:12 PM2 Mins Read
Recent News

2026–27ನೇ ಸಾಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಮೊದಲ ಕಂತಿನ ಅನುದಾನ ಬಿಡುಗಡೆ

20/04/2026 9:28 PM

ರಾಹುಲ್‌ ಗಾಂಧಿ ಪೌರತ್ವ ಪ್ರಕರಣ: ಅರ್ಜಿದಾರನ ‘ಅಸಭ್ಯ’ ಪೋಸ್ಟ್‌ಗೆ ನ್ಯಾಯಾಧೀಶರ ಕೆಂಡಾಮಂಡಲ!

20/04/2026 9:21 PM

ಕರ್ನಾಟಕ ಮಾದರಿಯಲ್ಲಿ ತಮಿಳುನಾಡಿನ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ಹಣ: ಡಿಸಿಎಂ ಡಿ.ಕೆ.ಶಿವಕುಮಾರ್

20/04/2026 9:21 PM

ಸಿಇಟಿ ಪರೀಕ್ಷೆ 2026: ಕೆಇಎಯಿಂದ ವಸ್ತ್ರಸಂಹಿತೆ ಜಾರಿ, ಕಿವಿಯೋಲೆ, ಉಂಗುರಕ್ಕೂ ನಿರ್ಬಂಧ; ಮಂಗಳಸೂತ್ರಕ್ಕೆ ವಿನಾಯಿತಿ

20/04/2026 9:12 PM
State News
KARNATAKA

2026–27ನೇ ಸಾಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಮೊದಲ ಕಂತಿನ ಅನುದಾನ ಬಿಡುಗಡೆ

By kannadanewsnow0920/04/2026 9:28 PM KARNATAKA 1 Min Read

ಬೆಂಗಳೂರು; ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು 2026–27ನೇ ಸಾಲಿನ ಮೊದಲ ಕಂತಿನ ಅನುದಾನ ಬಿಡುಗಡೆಗೆ ಸಂಬಂಧಿಸಿದಂತೆ…

ಕರ್ನಾಟಕ ಮಾದರಿಯಲ್ಲಿ ತಮಿಳುನಾಡಿನ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ಹಣ: ಡಿಸಿಎಂ ಡಿ.ಕೆ.ಶಿವಕುಮಾರ್

20/04/2026 9:21 PM

ಸಿಇಟಿ ಪರೀಕ್ಷೆ 2026: ಕೆಇಎಯಿಂದ ವಸ್ತ್ರಸಂಹಿತೆ ಜಾರಿ, ಕಿವಿಯೋಲೆ, ಉಂಗುರಕ್ಕೂ ನಿರ್ಬಂಧ; ಮಂಗಳಸೂತ್ರಕ್ಕೆ ವಿನಾಯಿತಿ

20/04/2026 9:12 PM

ಗಮನಿಸಿ : ನೀವು ಮಲಗುವ ಭಂಗಿಯಿಂದಲೂ ತಿಳಿಯಬಹುದು ನಿಮ್ಮ ವ್ಯಕ್ತಿತ್ವ.! ಇಲ್ಲಿದೆ ಮಾಹಿತಿ

20/04/2026 8:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.