ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕಳೆದ ಕೆಲ ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದ್ದು, ನಾಳೆಯೂ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.
ನಾಳೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವ ಕಾರಣ ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್ ಆರ್ ಪುರ ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ನೀಡಲಾಗಿದೆ.
ಇದಕ್ಕೂ ಮೊದಲು ಉಪವಿಭಾಗಾಧಿಕಾರಿಗಳ ಕಚೇರಿಯಿಂದ ಶಾಲೆಗಳಿಗೆ ರಜೆ ಘೋಷಣೆ ಮಾಡಿದ ನಕಲಿ ಆದೇಶ ಪ್ರತಿ ಹೊರ ಬಿದ್ದು ಗೊಂದಲ ಮೂಡಿತ್ತು. ಆ ನಂತ್ರ ಮಕ್ಕಳು, ಪೋಷಕರಲ್ಲಿ ರಜೆ ಬಗ್ಗೆ ಗೊಂದಲ ನಿರ್ಮಾಣವಾಗಿತ್ತು. ಹೀಗಾಗಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್, ನಾಳೆ ಅಂಗನವಾಡಿಗಳಿಗೆ ಮಾತ್ರವೇ ರಜೆ ನೀಡಿರುವುದಾಗಿ ಅಧಿಕೃತ ಆದೇಶ ಹೊರಡಿಸಿ, ತಿಳಿಸಿದ್ದಾರೆ.
BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED
UPSC ಪೂರ್ವಭಾವಿ, ಮುಖ್ಯ ಪರೀಕ್ಷೆಗೆ ‘ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ