ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮದಲ್ಲಿ ಶಾಲೆಗೆ ಬೀಜ ಜಡಿದು ಶಿಕ್ಷಕರು ಮೋಜು-ಮಸ್ತಿಗಾಗಿ ಪ್ರವಾಸಕ್ಕೆ ತೆರಳಿದ್ದಾರೆ.
BIGG NEWS: ರಾಜ್ಯ ಕಾಂಗ್ರೆಸ್ನಲ್ಲಿ ಟಿಕೆಟ್ ಫೈಟ್: ಕೊಡಗಿನಲ್ಲಿ 2 ಕ್ಷೇತ್ರಗಳಿಗೆ 9 ಜನರಿಂದ ಅರ್ಜಿ
ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕರು ಶಿಕ್ಷಣ ಇಲಾಖೆಯ ಮೇಲಾಧಿಕಾರಿಗಳಿಗೆ ಮಾಹಿತಿ ನೀಡದೆ ನವೆಂಬರ್ 12 ರಂದು ಶನಿವಾರ ಮಕ್ಕಳಿಗೆ ರಜೆ ಘೋಷಿಸಿ ಆಂಡೇಲಿ ಪ್ರವಾಸಕ್ಕೆ ಹೋಗಿದ್ದಾರೆ. ಈ ಗಟನೆ ತಡವಾಗಿ ಬೆಳಕಿಗೆ ಬಂದಿದೆ.
ಶೈಕ್ಷಣಿಕ ಪ್ರವಾಸಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಬೇಕಿದ್ದ ಶಿಕ್ಷಕರು ಮೋಜು ಮಸ್ತಿಗಾಗಿ ತಾವೇ ಪ್ರವಾಸ ಕೈಗೊಂಡಿದ್ದಾರೆ. ಈ ಶಾಲೆಯಲ್ಲಿ ಎಲ್ ಕೆಜಿಯಿಂದ ಎಸ್ ಎಸ್ ಎಲ್ ಸಿ ವರೆಗೆ 290 ಮಕ್ಕಳು ಕಲಿಯುತ್ತಿದ್ದಾರೆ. ಎಲ್ಲಾ ಮಕ್ಕಳಿಗೆ ಒಂದು ದಿನ ರಜೆ ನೀಡಿ ಮುಖ್ಯ ಶಿಕ್ಷಕರ ನೇತೃತ್ವದಲ್ಲಿ ಎಲ್ಲಾ 14 ಜನ ಶಿಕ್ಷಕರು ಮತ್ತು ಶಿಕ್ಷಕಿಯರು ಪ್ರವಾಸಕ್ಕೆ ಹೋಗಿ ಬಂದಿದ್ದಾರೆ.