ಶಿವಮೊಗ್ಗ: ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ನಾಳೆ ಕೂಡ ಆರೇಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ನಾಳೆ ಸಾಗರ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್ ಆದೇಶಿಸಿದ್ದಾರೆ.
ಇಂದು ಭಾರೀ ಮಳೆಯ ಕಾರಣದಿಂದಾಗಿ ಸಾಗರ ತಾಲ್ಲೂಕಿನ ಶಾಲೆಗಳಿಗೆ ರಜೆಯನ್ನು ನೀಡಲಾಗಿತ್ತು. ನಾಳೆ ಕೂಡ ಭಾರೀ ಮಳೆಯಾಗುವ ಹಿನ್ನಲೆಯಲ್ಲಿ ಸಾಗರ ತಾಲ್ಲೂಕಿನ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆಯನ್ನು ನೀಡಲಾಗುತ್ತಿದೆ ಎಂದು ಆದೇಶದಲ್ಲಿ ಚಂದ್ರಶೇಖರ್ ನಾಯ್ಕ್ ತಿಳಿಸಿದ್ದಾರೆ.
ನಾಳೆ ಸಾಗರ ತಾಲ್ಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣದಿಂದಾಗಿ ದಿನಾಂಕ 26-07-2025ರ ಶನಿವಾರದಂದು ಅಂಗನವಾಡಿ ಕೇಂದ್ರ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆಯನ್ನು ನೀಡಲಾಗಿದೆ. ರಜೆಯ ಅವಧಿಯ ತರಗತಿ ಪಠ್ಯಗಳನ್ನು ಮುಂದಿನ ದಿನಗಳಲ್ಲಿ ಸರಿ ದೂಗಿಸುವಂತೆ ತಹಶೀಲ್ದಾರ್ ಸೂಚಿಸಿದ್ದಾರೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು
ಸಾರ್ವಜನಿಕರಿಗೆ ಅನಗತ್ಯವಾಗಿ ಕಿರುಕುಳ ಕೊಡುವುದನ್ನು ‘ಪೊಲೀಸ್ ಇಲಾಖೆ’ ಸಹಿಸುವುದಿಲ್ಲ: ಸಾಗರ ಡಿವೈಎಸ್ಪಿ ಎಚ್ಚರಿಕೆ
ರಾಹುಲ್ ಗಾಂಧಿ ಅವರ ಧ್ವನಿಗೆ ನಾವೂ ಧ್ವನಿ ಸೇರಿಸುತ್ತೇವೆ: ಡಿಸಿಎಂ ಡಿ.ಕೆ ಶಿವಕುಮಾರ್