BREAKING: ನಾಳೆ ‘ಸಾಗರ’ ತಾಲ್ಲೂಕಿನ ಶಾಲೆಗಳಿಗೆ ರಜೆ: ತಹಶೀಲ್ದಾರ್ ಚಂದ್ರಶೇಖರ ನಾಯ್ಕ್ ಆದೇಶ

ಶಿವಮೊಗ್ಗ: ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ನಾಳೆ ಕೂಡ ಆರೇಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ನಾಳೆ ಸಾಗರ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್ ಆದೇಶಿಸಿದ್ದಾರೆ. ಇಂದು ಭಾರೀ ಮಳೆಯ ಕಾರಣದಿಂದಾಗಿ ಸಾಗರ ತಾಲ್ಲೂಕಿನ ಶಾಲೆಗಳಿಗೆ ರಜೆಯನ್ನು ನೀಡಲಾಗಿತ್ತು. ನಾಳೆ ಕೂಡ ಭಾರೀ ಮಳೆಯಾಗುವ ಹಿನ್ನಲೆಯಲ್ಲಿ ಸಾಗರ ತಾಲ್ಲೂಕಿನ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆಯನ್ನು ನೀಡಲಾಗುತ್ತಿದೆ ಎಂದು ಆದೇಶದಲ್ಲಿ ಚಂದ್ರಶೇಖರ್ ನಾಯ್ಕ್ ತಿಳಿಸಿದ್ದಾರೆ. … Continue reading BREAKING: ನಾಳೆ ‘ಸಾಗರ’ ತಾಲ್ಲೂಕಿನ ಶಾಲೆಗಳಿಗೆ ರಜೆ: ತಹಶೀಲ್ದಾರ್ ಚಂದ್ರಶೇಖರ ನಾಯ್ಕ್ ಆದೇಶ