ಬೆಂಗಳೂರು : ಇದೇ 22ರಂದು ಬಾಲರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಜನವರಿ 22ರಂದು ಈಗಾಗಲೇ ದೇಶದ ಹಲವು ರಾಜ್ಯಗಳಲ್ಲಿ ಅಲ್ಲಿನ ಸರ್ಕಾರ ರಜೆ ನೀಡಿದ್ದು ಕೇಂದ್ರ ಸರ್ಕಾರ ಕೂಡ ಅರ್ಧ ದಿನ ರಜೆ ಘೋಷಿಸಿದೆ ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕೂಡ ರಜೆ ಘೋಷಿಸಬೇಕು ಎಂದು ಬಿಜೆಪಿ ನಾಯಕರು ಸಿಎಂ ಗೆ ಪತ್ರ ಬರೆದಿದ್ದರೆ.
ಈ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ರಾಜ್ಯದಲ್ಲಿ ರಜೆ ನೀಡುವ ವಿಚಾರವಾಗಿ ಆ ಬಗ್ಗೆ ನನಗೆ ಪತ್ರ ಬಂದಿಲ್ಲ. ಆ ಕುರಿತಂತೆ ನೋಡುತ್ತೇನೆ. ವಿಪಕ್ಷಗಳು ರಜೆಗೆ ಒತ್ತಾಯಿಸಿದ್ದು ನನಗೆ ಗೊತ್ತಿಲ್ಲ ಎಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಬಿವೈ ವಿಜಯೇಂದ್ರ ಆಗ್ರಹ
ಇದೇ 22ರಂದು ಬಾಲರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಜನವರಿ 22ರಂದು ರಾಜ್ಯಾದ್ಯಂತ ಸರ್ಕಾರ ರಜೆ ನೀಡುವಂತೆ ರಜೆ ಘೋಷಣೆ ಮಾಡಿ ರಾಮಭಕ್ತರಿಗೆ ಅನುಕೂಲ ಮಾಡಿಕೊಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರಾಜ್ಯ ಸರ್ಕಾರಕ್ಕೆ ಅಗ್ರಹಿಸಿದ್ದಾರೆ.
ಈಗಾಗಲೇ ಹಲವು ರಾಜ್ಯಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ. ಕೇಂದ್ರ ಸರ್ಕಾರ ಕೂಡ ಅರ್ಧ ದಿನ ರಜೆ ಘೋಷಣೆ ಮಾಡಿದೆ.ಹಾಗಾಗಿ ರಾಜ್ಯದಲ್ಲೂ ರಜೆ ಘೋಷಣೆ ಮಾಡಬೇಕು ಎಂದು ಬಿವೈ ವಿಜಯೇಂದ್ರ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಅಲ್ಲದೆ ರಾಮ ಭಕ್ತರಿಗೆ ಸಮಸ್ಯೆ ಆಗದಂತೆ ಸರ್ಕಾರ ನೋಡಿಕೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ರಾಮಮಂದಿರ ಕಾರ್ಯಕ್ರಮದ ವಿಚಾರದಲ್ಲಿ ಕಾಂಗ್ರೆಸ್ ಗೆ ಗೊಂದಲವಿದೆ. ದುರುದ್ದೇಶಪೂರ್ವಕವಾಗಿ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಯಿತು. ವಾತಾವರಣ ಕಲುಷಿತಗೊಳಿಸಬೇಕೆಂಬ ದುರುದ್ದೇಶದಿಂದಲೇ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಗಿತ್ತು. ಕಾಂಗ್ರೆಸ್ ನಾಯಕರು ರಾಮಮಂದಿರ ಅಹ್ವಾನವನ್ನು ತಿರಸ್ಕರಿಸಿದ್ದಾರೆ.
ಅಹ್ವಾನ ತಿರಸ್ಕರಿಸಿ ಬಹು ಸಂಖ್ಯಾತರ ಭಾವನೆಗೆ ಧಕ್ಕೆ ಮಾಡಿದ್ದಾರೆ. ಅಲ್ಪಸಂಖ್ಯಾತರಿಗೆ ನೋವಾಗುತ್ತದೆ ಎಂದು ಆಹ್ವಾನವನ್ನು ತಿರಸ್ಕರಿಸಿದರು. ರಾಮಮಂದಿರ ನಿರ್ಮಾಣಕ್ಕೆ ಕರ್ನಾಟಕದಿಂದ ವಿಶೇಷ ಕೊಡುಗೆ ಇದೆ ಅಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವೀರೇಂದ್ರ ಹೇಳಿದರು.
ಅದೇ ರೀತಿಯಾಗಿ ಎಂಎಲ್ಸಿ ಕೋಟ ಶ್ರೀನಿವಾಸ್ ಪೂಜಾರಿಯವರು ಕೂಡ 22ರಂದು ರಾಜ್ಯದಲ್ಲಿ ರಜೆ ಘೋಷಿಸಿ ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎಂದು ತಿಳಿದು ಬಂದಿದೆ ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನನಗೆ ಯಾವುದೇ ರೀತಿಯಾದಂತಹ ಪತ್ರದ ಕುರಿತು ವಿಷಯ ಗೊತ್ತಿಲ್ಲ ಒಂದು ವೇಳೆ ಬಂದರೆ ನೋಡುತ್ತೇನೆ ಎಂದು ಇದೀಗ ತಿಳಿಸಿದ್ದಾರೆ.