ಬೆಂಗಳೂರು: ನಗರದ ಗರ್ಭಿಣಿ ಮಹಿಳೆಯರು ಸೇರಿದಂತೆ ಸಾರ್ವಜನಿಕರಿಗೆ ನಿಯಮಿತ ಆರೋಗ್ಯ ತಪಾಸಣೆ ಸಂಬಂಧ ಜಿಬಿಎ ವ್ಯಾಪ್ತಿಗೂ ಗೃಹ ಆರೋಗ್ಯ ಯೋಜನೆ ವಿಸ್ತರಣೆ ಮಾಡಲಾಗಿದೆ.
ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದು, ಮನೆ ಬಾಗಿಲಲ್ಲಿಯೇ ವಿವಿಧ ಅನಾರೋಗ್ಯ ಸಮಸ್ಯೆಗಳನ್ನು ಪತ್ತೆ ಮಾಡಿ, ಔಷಧ ವಿತರಿಸುವ ಗೃಹ ಆರೋಗ್ಯ ಯೋಜನೆಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೂ ವಿಸ್ತರಿಸಲು ಮುಂದಾಗಿದ್ದೇವೆ. ಈ ಸಂಬಂಧ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಾಗಿದ್ದು, ಯೋಜನೆಯಡಿ ತಪಾಸಣೆ ಜೊತೆಗೆ ಔಷಧವನ್ನೂ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಮನೆ ಬಾಗಿಲಲ್ಲಿಯೇ ವಿವಿಧ ಅನಾರೋಗ್ಯ ಸಮಸ್ಯೆಗಳನ್ನು ಪತ್ತೆ ಮಾಡಿ, ಔಷಧ ವಿತರಿಸುವ ಗೃಹ ಆರೋಗ್ಯ ಯೋಜನೆಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೂ ವಿಸ್ತರಿಸಲು ಮುಂದಾಗಿದ್ದೇವೆ. ಈ ಸಂಬಂಧ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಾಗಿದ್ದು, ಯೋಜನೆಯಡಿ ತಪಾಸಣೆ ಜೊತೆಗೆ ಔಷಧವನ್ನೂ ನೀಡಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್… pic.twitter.com/B4jI4EAZva
— DIPR Karnataka (@KarnatakaVarthe) January 31, 2026
ಸರ್ಕಾರಿ ವೈದ್ಯರಿಗೆ ಖಾಸಗಿ ಆಸ್ಪತ್ರೆ ಒಪಿಡಿಯಲ್ಲಿ ಕೆಲಸ ಮಾಡಲು ಅವಕಾಶ
ಸರ್ಕಾರಿ ಆಸ್ಪತ್ರೆಗಳ ವೈದ್ಯರು ಖಾಸಗಿ ಆಸ್ಪತ್ರೆಗಳ ಹೊರರೋಗಿಗಳ (ಒಪಿಡಿ) ವಿಭಾಗದಲ್ಲಿ ಕೆಲಸ ಮಾಡಬಹುದು. ಖಾಸಗಿ ಸೇವೆಯಲ್ಲಿ ಒಳರೋಗಿಗಳಿಗೆ (IPD)ಸೇವೆ ನೀಡುವಂತಿಲ್ಲ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
"ಸರ್ಕಾರಿ ಆಸ್ಪತ್ರೆಗಳ ವೈದ್ಯರು ಖಾಸಗಿ ಆಸ್ಪತ್ರೆಗಳ ಹೊರರೋಗಿಗಳ (ಒಪಿಡಿ) ವಿಭಾಗದಲ್ಲಿ ಕೆಲಸ ಮಾಡಬಹುದು. ಖಾಸಗಿ ಸೇವೆಯಲ್ಲಿ ಒಳರೋಗಿಗಳಿಗೆ (IPD)ಸೇವೆ ನೀಡುವಂತಿಲ್ಲ."
– ದಿನೇಶ್ ಗುಂಡೂರಾವ್, ಆರೋಗ್ಯ ಸಚಿವರು pic.twitter.com/Q8uLSIkaw6
— DIPR Karnataka (@KarnatakaVarthe) January 30, 2026
ರಾಜ್ಯದಲ್ಲಿ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ಭಾಗ್ಯ: ಜನರು ತಿಳಿಯಲೇ ಬೇಕಾದ ವಿಚಾರಗಳಿವು!
ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಈಗ ಮೆಟ್ರೋ ರೈಲಿನಲ್ಲಿ ಈ ಎಲ್ಲವೂ ನಿಷೇಧ, ತಪ್ಪಿದ್ರೆ ಕೇಸ್, ದಂಡ ಫಿಕ್ಸ್








