ಬೆಂಗಳೂರು: ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯಲ್ಲಿ ( State Fire and Emergency Services Department ) ಖಾಲಿಯಿರುವ ಫೈರ್ ಮನ್ ಹುದ್ದೆ ಗಳಿಗೆ ಆಯ್ಕೆಯಾಗಿ, ನೇಮಕಾತಿ ನಿರೀಕ್ಷೆಯಲ್ಲಿದ್ದ, ಅಭ್ಯರ್ಥಿಗಳಿಗೆ, ನೇಮಕಾತಿ ಪತ್ರ ವಿತರಿಸಲು, ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ (Home Minister Araga Jnanendra ) ನಿರ್ದೇಶನ ನೀಡಿದ್ದಾರೆ. ಈ ಮೂಲಕ ಅಗ್ನಿಶಾಮ ದಳದ ಇಲಾಖೆಗೆ ಆಯ್ಕೆಯಾಗಿರುವಂತ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಈ ಬಗ್ಗೆ ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯು ಕ್ರಮ ಕೈಗೊಂಡಿದ್ದು, ಇದುವರೆಗೆ ಒಟ್ಟು 607 ಅಭ್ಯರ್ಥಿಗಳು ನೇಮಕಾತಿ ಆದೇಶ ಪಡೆದಿದ್ದಾರೆ. ಇನ್ನುಳಿದ ಅಭ್ಯರ್ಥಿಗಳ ಆಯ್ಕೆ ಸಿಂಧುತ್ವ ವನ್ನೂ ಪಡೆದಿದ್ದು, ನೇಮಕಾತಿ ಆದೇಶ ನೀಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
BREAKING NEWS: ‘ಆಲ್ಟ್ ನ್ಯೂಸ್’ನ ಸಹ ಸಂಸ್ಥಾಪಕ ‘ಮೊಹಮ್ಮದ್ ಜುಬೈರ್’ಗೆ ಜಾಮೀನು | Mohammed Zubair granted bail
ರಾಜ್ಯ ಸರಕಾರವು, ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಅಗ್ನಿಶಾಮಕ ಠಾಣೆ ಗಳನ್ನು ಆದ್ಯತೆ ಮೇರೆಗೆ ಸ್ಥಾಪಿಸಿದ್ದು, ಇದಕ್ಕೆ ಸಂಬಂಧಿಸಿದಂತೆ, ಹುದ್ದೆಗಳ ಭರ್ತಿಗೆ ಸಹ ಕ್ರಮ ಕೈಗೊಂಡಿದೆ. ಇಲಾಖೆಯಲ್ಲಿ ಒಟ್ಟು 7057 ವಿವಿಧ ಶ್ರೇಣಿಯ ಹುದ್ದೆಗಳಿದ್ದು, 2021ನೇ ವರ್ಷದ ಅಂತ್ಯಕ್ಕೆ, ಸುಮಾರು 2627 ಹುದ್ದೆ ಗಳು ಖಾಲಿಯಿದ್ದು, ಪ್ರಸ್ತುತ ವರ್ಷ 1567 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದರು.
ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಅಗ್ನಿಶಾಮಕ ಠಾಣೆ ಗಳ ಸ್ಥಾಪನೆಗೆ, ಸರಕಾರ ವಿಶೇಷ ಕ್ರಮ ಕೈಗೊಂಡು, ನೂತನ ಕಟ್ಟಡಗಳೂ ಹಾಗೂ ಇನ್ನಿತರ ಸೌಲಭ್ಯ ಗಳನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ