ಬೆಂಗಳೂರು : ಪಿಎಸ್ ಐ ನೇಮಕಾತಿ ಹಗರಣ ಸಂಬಂಧ ಗೃಹ ಸಚಿವ ಅರಗ ಜ್ಞಾನೇಂದ್ರ ಕೂಡ ಜೈಲಿಗೆ ಹೋಗ್ತಾರೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನದಲ್ಲಿ 40% ಕಮಿಷನ್, ಪಿಎಸ್ ಐ ನೇಮಕಾತಿ ಅಕ್ರಮದ ಬಗ್ಗೆ ಪ್ರಶ್ನಿಸುತ್ತೇವೆ. ಈ ಹಿಂದೆ ಪೊಲೀಸ್ ನೇಮಕಾತಿಯಲ್ಲಿ ಯಾವುದೇ ಅಕ್ರಮ ಆಗಿಲ್ಲ ಎಂದು ಅರಗಜ್ಞಾನೇಂದ್ರ ಹೇಳಿದ್ದರು. ನಂತರ ತಾನು ತಪ್ಪಿಸಿಕೊಳ್ಳಲು ಐಪಿಎಸ್ ಅಧಿಕಾರಿಯನ್ನು ಬಲಿಕೊಟ್ಟರು. ಪಿಎಸ್ ಐ ಅಕ್ರಮದಲ್ಲಿ ಅರಗಜ್ಞಾನೇಂದ್ರ ಕೂಡ ಜೈಲಿಗೆ ಹೋಗಲಿದ್ದಾರೆ ಎಂದರು.
BIGG NEWS : ಪೋಕ್ಸೋ ಪ್ರಕರಣ : ಇಂದು ಮುರುಘಾ ಶರಣರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ