ಸುಭಾಷಿತ :

Wednesday, January 29 , 2020 9:36 PM

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ‘ಸಿಹಿಸುದ್ದಿ’ : 6 ಸಾವಿರ ಪೊಲೀಸ್ ಹುದ್ದೆಗೆ ನೇಮಕಾತಿಗೆ ನಿರ್ಧಾರ : ಗೃಹ ಸಚಿವರಿಂದ ಸ್ಪಷ್ಟನೆ


Saturday, December 7th, 2019 6:34 pm

ಬೆಂಗಳೂರು : ರಾಜ್ಯದಲ್ಲಿ ಭದ್ರತೆಗೆ ಹೆಚ್ಚಿನ ಪೊಲೀಸರ ಅವಶ್ಯಕತೆ ಇದ್ದು, ಇದಕ್ಕಾಗಿ ಸದ್ಯದಲ್ಲೇ 6 ಸಾವಿರ ಪೊಲೀಸರನ್ನು ನೇಮಕ ಮಾಡಿಕೊಳ್ಳಲಾಗುವುದು ಈ ಪೈಕಿ ಬೆಂಗಳೂರಿಗೆ ಒಂದು ಸಾವಿರ ಪೊಲೀಸರನ್ನು ನಿಯೋಜಿಸುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲೂ ಮಹಿಳೆಯರ ಸುರಕ್ಷತೆಗೆ ಒತ್ತು ನೀಡಲು ನಿರ್ಧರಿಸಲಾಗಿದ್ದು, ಈ ಕುರಿತು ಕಾನೂನು ಮತ್ತು ಗೃಹ ಇಲಾಖೆಯ ಅಧಿಕಾರಿಗಳೊಂದಿಗೆ ಇಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಭೆ ನಡೆಸಿದರು. ಸಭೆಯ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಆತ್ಮರಕ್ಷಣೆ ತರಬೇತಿ ನೀಡುವ 22 ಕೇಂದ್ರ ಸ್ಥಾಪಿಸಲಿದ್ದು, ಈ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ತರಬೇತಿ ನೀಡಲಾಗುವುದು. ರಾತ್ರಿ ವೇಳೆ ಗಸ್ತು ಹೆಚ್ಚಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಇನ್ನು ಇದೇ ವೇಳೆ ರಾಜ್ಯದಲ್ಲಿ 14 ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಇದೇ ವೇಳೆ, ರಾತ್ರಿ ಗಸ್ತಿಗೆ ಸ್ವಯಂಸೇವಕರ ದಳ ಸ್ಥಾಪನೆ ಮಾಡಲು ನಿರ್ಧರಿಸಿದ್ದು, ಇದರಲ್ಲಿ ಮಹಿಳೆಯರಿಗೂ ಅವಕಾಶ ಕಲ್ಪಿಸಲಾಗುವುದು ಎಂದರು. ಸುರಕ್ಷಾ ಆ್ಯಪ್ ಚುರುಕುಗೊಳಿಸಲು ತೀರ್ಮಾನಿಸಿದ್ದು, ರೆಸ್ಪಾನ್ಸ್ ಟೈಮ್ ನ್ನು 9ರಿಂದ 7 ನಿಮಿಷಕ್ಕೆ ಇಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಗೃಹ ಇಲಾಖೆಗೆ 183 ರೆಸ್ಪಾನ್ಸ್ ವಾಹನ ನೀಡಲಾಗಿದ್ದು, ಇದನ್ನು 500 ವಾಹನಗಳಿಗೆ ಹೆಚ್ಚಳ ಮಾಡುವುದಾಗಿ ತಿಳಿಸಿದರು. ಇನ್ನು ರಾತ್ರಿ ಗಸ್ತಿಗೆ ಹಿರಿಯ ಅಧಿಕಾರಿಗಳು ತೆರಳುವಂತೆ ಸೂಚಿಸಲಾಗಿದೆ ಎಂದು ವಿವರಿಸಿದರು…

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions