ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಶರಣ ಪ್ರಕಾಶ್ ಪಾಟೀಲ್ ಹೆಸರು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆ ವೇಳೆ ಅನೇಕ ವಿಚಾರಗಳು ಬೆಳಕಿಗೆ ಬರುತ್ತವೆ. ತನಿಖೆಯಲ್ಲಿ ಹಲವರ ಹೆಸರುಗಳು ಹೊರ ಬರುತ್ತವೆ. ಈ ಬಗ್ಗೆ ಎಸ್ ಐಟಿ ಅಧಿಕಾರಿಗಳೂ ತನಿಖೆ ನಡೆಸುತ್ತಾರೆ. ಶರಣ ಪ್ರಕಾಶ್ ಪಾಟೀಲ್ ರಾಜೀನಾಮೆಗೆ ಬಿಜೆಪಿಯವರು ಒತ್ತಾಯಿಸುತ್ತಿದ್ದಾರೆ. ಆದರೆ ಯಾರು ಏನೇ ಹೇಳಿದ್ರೂ ಅದನ್ನು ಪರಿಶೀಲಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ವಾಲ್ಮೀಕಿ ನಿಗಮದ ಹಗರಣದಲ್ಲಿ ಮತ್ತೊಬ್ಬ ಸಚಿವರ ತಲೆದಂಡಕ್ಕೆ ಆಗ್ರಹ ಕೇಳಿ ಬಂದಿದೆ. ಸಚಿವ ಶರಣಪ್ರಕಾಶ್, ದದ್ದಲ್ ಇಬ್ಬರೂ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ನಾಯಕರು ಒತ್ತಾಯ ಮಾಡುತ್ತಿದ್ದಾರೆ.