ಬೆಂಗಳೂರು : ರಾಸಲೀಲೆ ಪೆನ್ ಡ್ರೈವ್ ಪ್ರಕರಣದ ಸಂಬಂಧ ರೇವಣ್ಣ ಇರಲಿ, ಪ್ರಜ್ವಲ್ ಇರಲಿ ಯಾರೇ ಇದ್ರೂ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್ ಡ್ರೈವ್ ಪ್ರಕರಣದಲ್ಲಿ ಯಾರೇ ಇದ್ರೂ ಕ್ರಮ ಕೈಗೋಳ್ಳುತ್ತೇವೆ. ಪ್ರಕರಣದ ತನಿಖೆಯನ್ನು ಎಸ್ ಐಟಿಗೆ ವಹಿಸಿದ್ದೇವೆ. ಸಂತ್ರಸ್ತೆಯ ಹೆಸರು ಉಲ್ಲೇಖಿಸಿದವರ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ವಿದೇಶದಿಂದ ಪ್ರಜ್ವಲ್ ರೇವಣ್ಣ ವಾಪಸ್ ಕರೆಸುತ್ತೇವೆ. ಎಸ್ ಐಟಿ ವರದಿ ಬಂದ ನಂತರ ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಅಧಿಕಾರಿಗಳು ಪೆನ್ ಡ್ರೈವ್ ಸಾಕ್ಷಿಯನ್ನು ಹುಡುಕಿ ವಿಚಾರಣೆ ನಡೆಸಲಿದ್ದಾರೆ ಎಂದರು.