ತುಮಕೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಅಲ್ಲದೆ ಕಳೆದ ಹಲವು ದಿನಗಳಿಂದ ಸೋಂಕಿನಿಂದ ಮಕ್ಕಳು ಹಾಗೂ ಯುವಕರು ಬಲಿಯಾಗುತ್ತಿದ್ದಾರೆ ಈ ಕುರಿತು ಇಂದು ತುಮಕೂರಲ್ಲಿ ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ಹೈ ವೋಲ್ಟೇಜ್ ಸಭೆ ನಡೆಸಿದರು.
ಹೌದು ಡೆಂಘಿ ಪ್ರಕರಣಗಳ ನಿಯಂತ್ರಣಕ್ಕೆ ಇಂದು ತುಮಕೂರು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ನೇತೃತ್ವದಲ್ಲಿ ಹೈ ವೋಲ್ಟೇಜ್ ಮೀಟಿಂಗ್ ನಡೆಸುತ್ತಿದ್ದು, ಆರೋಗ್ಯ ಅಧಿಕಾರಿಗಳ ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾಕ್ಟರ್ ಜಿ ಪರಮೇಶ್ವರ್ ಸಭೆ ನಡೆಸುತ್ತಿದ್ದಾರೆ.
ತುಮಕೂರು ನಗರ ಜಿಲ್ಲೆ ಸೇರಿ 10 ತಾಲೂಕುಗಳ ಅಧಿಕಾರಿಗಳು ಈ ಒಂದು ಸಭೆಯಲ್ಲಿ ಭಾಗಿಯಾಗಿದ್ದಾರೆ.ಸಭೆಯಲ್ಲಿ ಡೇಂಗಿ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. ಇದೆ ವೇಳೆ ತಾಲೂಕು ಮಟ್ಟದಲ್ಲೂ ಫಾಗಿಂಗ್ ಮಷೀನ್ ಖರೀದಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ತುಮಕೂರು ಜಿಲ್ಲೆಯಲ್ಲಿ ಡೆಂಗಿ ಪ್ರಕರಣ ಹೇಗೆ ನಿಯಂತ್ರಿಸುತಿದ್ದೀರಿ ಏನಿಲ್ಲ ಕ್ರಮ ಕೈಗೊಂಡಿದ್ದೀರಿ ಎಂದು ಅಧಿಕಾರಿಗಳ ಜೊತೆ ಚರ್ಚಿಸುತ್ತಿದ್ದಾರೆ.