ಬೆಂಗಳೂರು: ರಾಜ್ಯದಲ್ಲಿ ಪ್ರವಾಸಿಗರ ಭದ್ರತೆ ಮತ್ತು ಸುರಕ್ಷತೆಗೆ ವಿಶೇಷ ಆದ್ಯತೆಯನ್ನು ನೀಡುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.
ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಆನೆಗುಂದಿ, ಸಣಾಪೂರ, ಬಸಾಪೂರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ರೆಸಾರ್ಟ್ ಹಾಗೂ ಹೋಮ್ ಸ್ಟೇ ಮಾಲೀಕರೊಂದಿಗೆ ಗಂಗಾವತಿ ಡಿಎಸ್‌ಪಿ ಕಚೇರಿಯಲ್ಲಿ ಸಭೆ ನಡೆಸಲಾಗಿದೆ ಎಂದರು.
ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಆನೆಗುಂದಿ, ಸಣಾಪೂರ, ಬಸಾಪೂರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ರೆಸಾರ್ಟ್ ಹಾಗೂ ಹೋಮ್ ಸ್ಟೇ ಮಾಲೀಕರೊಂದಿಗೆ ಗಂಗಾವತಿ ಡಿಎಸ್‌ಪಿ ಕಚೇರಿಯಲ್ಲಿ ಸಭೆ ನಡೆಸಲಾಗಿದೆ. ಪ್ರವಾಸಿಗರ ಮಾಹಿತಿಯನ್ನು ಕಡ್ಡಾಯವಾಗಿ ದಾಖಲು ಮಾಡುವುದು, ಸೂಕ್ತ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಸುವುದು ಸೇರಿದಂತೆ ವಿದೇಶಿ… pic.twitter.com/psBrh8IFL0
— DIPR Karnataka (@KarnatakaVarthe) March 18, 2025
ಪ್ರವಾಸಿಗರ ಮಾಹಿತಿಯನ್ನು ಕಡ್ಡಾಯವಾಗಿ ದಾಖಲು ಮಾಡುವುದು, ಸೂಕ್ತ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಸುವುದು ಸೇರಿದಂತೆ ವಿದೇಶಿ ಪ್ರವಾಸಿಗರ ಆಗಮನದ ಮಾಹಿತಿಯನ್ನು ಕಡ್ಡಾಯವಾಗಿ ಸ್ಥಳೀಯ ಪೊಲೀಸ್ ಠಾಣೆಗೆ ತಿಳಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಹೆಚ್ಚಿನ ಸುರಕ್ಷತೆಗಾಗಿ ಪೊಲೀಸ್ ಇಲಾಖೆಯಿಂದ ಹೆದ್ದಾರಿ ಗಸ್ತು ವಾಹನ ನಿಯೋಜಿಸಿದ್ದು, ಇನ್ಸ್ಪೆಕ್ಟರ್ ದರ್ಜೆಯ ಅಧಿಕಾರಿಯನ್ನು ಮೇಲುಸ್ತುವಾರಿಗಾಗಿ ನೇಮಿಸಲಾಗಿದೆ ಎಂದು ಗೃಹ ಸಚಿವರಾದ ಡಾ.ಜಿ ಪರಮೇಶ್ವರ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ರಾಜ್ಯದಲ್ಲಿ ಅಕ್ರಮ ಮರಳು ದಂಧೆಗೆ ಯುವಕರಿಬ್ಬರು ಬಲಿ: ಟಿಪ್ಪರ್ ಹರಿದು ಸ್ಥಳದಲ್ಲೇ ಬೈಕ್ ಸವಾರರು ಸಾವು
BIG NEWS: ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್ ಸಂಸ್ಥೆ’ಗಳಿಗೆ ನೋಂದಣಿ ಕಡ್ಡಾಯ: ಗೃಹ ಸಚಿವ ಪರಮೇಶ್ವರ್