Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ `ಉಪನ್ಯಾಸಕರ ಹುದ್ದೆಗೆ ಬಡ್ತಿ’ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ !

27/02/2026 6:21 AM

ರೈತರೇ ಗಮನಿಸಿ : ಪಿಎಂ-ಕಿಸಾನ್ ಪ್ರೋತ್ಸಾಹಧನ ಪಡೆಯಲು ತಪ್ಪದೇ ಈ ಕೆಲಸ ಮಾಡಿ !

27/02/2026 6:11 AM

ರಾಜ್ಯ ಸರ್ಕಾರದಿಂದ `SC-ST’ ಸಮುದಾಯವರಿಗೆ ಗುಡ್ ನ್ಯೂಸ್ : ಕುರಿ-ಮೇಕೆ ಘಟಕ ಸ್ಥಾಪನೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

27/02/2026 6:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಾಜ್ಯಾಧ್ಯಂತ್ಯ ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಬಿಗಿ ಬಂದೋಬಸ್ತ್: ಗೃಹ ಸಚಿವ ಡಾ.ಜಿ ಪರಮೇಶ್ವರ್
KARNATAKA

BREAKING: ರಾಜ್ಯಾಧ್ಯಂತ್ಯ ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಬಿಗಿ ಬಂದೋಬಸ್ತ್: ಗೃಹ ಸಚಿವ ಡಾ.ಜಿ ಪರಮೇಶ್ವರ್

By kannadanewsnow0923/12/2024 4:46 PM

ಬೆಂಗಳೂರು : ನಗರದಲ್ಲಿ ಕ್ರಿಸ್ಮಸ್ ಆಚರಣೆ ಹಾಗೂ ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅನಾಹುತಗಳು ಸಂಭವಿಸದಂತೆ‌ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಸೂಚಿಸಿದರು.

ನಗರ ಪೊಲೀಸ್ ಆಯುಕ್ತ ಕಚೇರಿಯಲ್ಲಿ ಸೋಮವಾರ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕಳೆದ ವರ್ಷ ಅಚ್ಚುಕಟ್ಟಾಗಿ ಬಂದೋಬಸ್ತ್ ವ್ಯವಸ್ಥೆ ಕೈಗೊಂಡು ಕ್ರಿಸ್ಮಸ್ ಹಾಗೂ ಹೊಸ ವರ್ಷ ಆಚರಣೆಗೆ ಕ್ರಮ ವಹಿಸಲಾಗಿತ್ತು. ಬೆಂಗಳೂರು ವಿಶ್ವದ ಗಮನ ಸೆಳೆಯುವ ನಗರವಾಗಿರುವುದರಿಂದ ಯಾವುದನ್ನು ನಿರ್ಲಕ್ಷಿಸದೇ ,ಅತ್ಯಂತ ಜವಾಬ್ಧಾರಿಯುತವಾಗಿ ಬಂದೋಬಸ್ತ್ ಕೈಗೊಳ್ಳಬೇಕು ಎಂದರು.

ಕ್ರಿಸ್ಮಸ್ ಆಚರಣೆ ಹಿನ್ನೆಲೆಯಲ್ಲಿ ಗುಪ್ತದಳ ಇಲಾಖೆಯೊಂದಿಗೆ ನಿರಂತರವಾಗಿ‌ ಸಂಪರ್ಕದಲ್ಲಿರಬೇಕು. ಮಹಿಳಾ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಸಣ್ಣ ಪುಟ್ಟ ಅನಾಹುತಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕಿದೆ. ಹೊಸ ವರ್ಷ ಆಚರಿಸುವವರಿಗೆ ಆಡಚಣೆ ಮಾಡುವುದು ಬೇಡ. ಅವರಿಗೆ ಸುರಕ್ಷತೆ ನೀಡಬೇಕು. ತೊಂದರೆ ಉಂಟು ಮಾಡುವ ಕಿಡಿಗೇಡಿಗಳ ಮೇಲೆ ನಿಗಾವಹಿಸಿ ಕ್ರಮ ಜರುಗಿಸಬೇಕು ಎಂದು ಹೇಳಿದರು‌.

ಅಗತ್ಯ ಬಂದೋಬಸ್ತ್ ಹಿನ್ನಲೆಯಲ್ಲಿ ನಗರ‌ದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ರಜೆ ನೀಡುವುದು ಬೇಡ. ತೀರ ಅಗತ್ಯತೆ ಮತ್ತು ಅನಿವಾರ್ಯತೆ ಇದ್ದವರಿಗೆ ರಜೆ ನೀಡಿ. ಕ್ರಿಸ್ಮಸ್ ಮತ್ತು ಹೊಸ ವರ್ಷ ಆಚರಣೆ ವೇಳೆ ಯಾವುದೇ ರೀತಿಯ ಅನಾಹುತಗಳು ಸಂಭವಿಸಿದರೆ ಸಂಬಂಧಪಟ್ಟ ಡಿಸಿಪಿ, ಎಸಿಪಿ, ಇನ್‌ಸ್ಪೆಕ್ಟರ್‌ಗಳನ್ನೇ ಹೊಣೆ ಮಾಡಲಾಗುವುದು. ಈ ವಿಚಾರದಲ್ಲಿ ಯಾರು ಏನೇ ಹೇಳಿದರು ಕೇಳುವುದಿಲ್ಲ ಎಂದು ಎಚ್ಚರಿಸಿದರು.

ಬಿಬಿಎಂಪಿ, ಬಿಎಂಟಿಸಿ ಬಿಎಂಆರ್‌ಸಿಎಲ್, ಆರೋಗ್ಯ ಮತ್ತು ಅಗ್ನಿಶಾಮಕ ಇಲಾಖೆಯ ನೆರವು ಪಡೆದುಕೊಳ್ಳಬೇಕು. ಅಗ್ನಿ ಅವಘಡಗಳು ಸಂಭವಿಸದಂತೆ ಮುನ್ನಚ್ಚರಿಕೆ ವಹಿಸಬೇಕು. ಡ್ರಂಕ್ ಆ್ಯಂಡ್ ಡ್ರೈವ್, ಬೈಕ್ ವ್ಹೀಲಿಂಗ್ ಮಾಡುವ ಕಿಡಿಗೇಡಿಗಳು ಹಾಗೂ ಹಳೇ‌ ಪ್ರಕರಣಗಳ ಆರೋಪಿಗಳ ಮೇಲೆ ನಿಗಾ ಇರಿಸಬೇಕು. ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕೈಗೊಳ್ಳುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್‌ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಸಿಸಿಬಿ ವಿಭಾಗದ ಹೆಚ್ಚುವರಿ ಆಯುಕ್ತ ಡಾ. ಚಂದ್ರಗುಪ್ತ ಹಾಗೂ ಎಲ್ಲ ವಿಭಾಗದ ಉಪ ಪೊಲೀಸ್ ಆಯುಕ್ತರು, ಸಹಾಯಕ ಪೊಲೀಸ್ ಆಯುಕ್ತರು ಇದ್ದರು.

ಏಳು ಲಕ್ಷ ಜನ ಸೇರುವ ಸಾಧ್ಯತೆ

ನಗರದಲ್ಲಿ ಹೊಸ ವರ್ಷ ಆಚರಣೆಗೆ 7 ಲಕ್ಷ ಜನ ಸೇರುವ ಸಾಧ್ಯತೆ ಇದ್ದು, ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ.‌ಜಿ.ಪರಮೇಶ್ವರ ಅವರು ಹೇಳಿದರು.

ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೊಲೀಸರು ಕೈಗೊಂಡಿರುವ ಮುಂಜಾಗ್ರತಾ ಕ್ರಮದ ಬಗ್ಗೆ ಚರ್ಚಿಸಲಾಗಿದೆ.‌ಎಲ್ಲರು ಸಂತೋಷದಿಂದ ಕ್ರಿಸ್ಮಸ್ ಮತ್ತು ಹೊಸ ವರ್ಷ ಆಚರಿಸಲು ಸಹಕರಿಸಲಾಗುವುದು‌. ಮಹಿಳಾ‌ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಮೆಟ್ರೋ ವ್ಯವಸ್ಥೆ, ಓಲಾ, ಊಬರ್ ಮುಂತಾದ ವ್ಯವಸ್ಥೆ ಬಗ್ಗೆ ಪರಿಶೀಲಿಸಲಾಗಿದೆ ಎಂದರು.

GOOD NEWS: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮತ್ತೆ ದ್ವಿತೀಯ PUC ಪರೀಕ್ಷೆ-1ಕ್ಕೆ ನೋಂದಣಿಗೆ ಅವಧಿ ವಿಸ್ತರಣೆ

BIG NEWS: ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ವಿರುದ್ಧ ಕಾನೂನು ಸಮರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Share. Facebook Twitter LinkedIn WhatsApp Email

Related Posts

ರಾಜ್ಯದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ `ಉಪನ್ಯಾಸಕರ ಹುದ್ದೆಗೆ ಬಡ್ತಿ’ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ !

27/02/2026 6:21 AM1 Min Read

ರೈತರೇ ಗಮನಿಸಿ : ಪಿಎಂ-ಕಿಸಾನ್ ಪ್ರೋತ್ಸಾಹಧನ ಪಡೆಯಲು ತಪ್ಪದೇ ಈ ಕೆಲಸ ಮಾಡಿ !

27/02/2026 6:11 AM1 Min Read

ರಾಜ್ಯ ಸರ್ಕಾರದಿಂದ `SC-ST’ ಸಮುದಾಯವರಿಗೆ ಗುಡ್ ನ್ಯೂಸ್ : ಕುರಿ-ಮೇಕೆ ಘಟಕ ಸ್ಥಾಪನೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

27/02/2026 6:08 AM1 Min Read
Recent News

ರಾಜ್ಯದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ `ಉಪನ್ಯಾಸಕರ ಹುದ್ದೆಗೆ ಬಡ್ತಿ’ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ !

27/02/2026 6:21 AM

ರೈತರೇ ಗಮನಿಸಿ : ಪಿಎಂ-ಕಿಸಾನ್ ಪ್ರೋತ್ಸಾಹಧನ ಪಡೆಯಲು ತಪ್ಪದೇ ಈ ಕೆಲಸ ಮಾಡಿ !

27/02/2026 6:11 AM

ರಾಜ್ಯ ಸರ್ಕಾರದಿಂದ `SC-ST’ ಸಮುದಾಯವರಿಗೆ ಗುಡ್ ನ್ಯೂಸ್ : ಕುರಿ-ಮೇಕೆ ಘಟಕ ಸ್ಥಾಪನೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

27/02/2026 6:08 AM

BIG NEWS : `RTI’ ಅಡಿ ಪತ್ನಿ/ಪತಿ ಐಟಿ ರಿಟರ್ನ್ಸ್ ಮಾಹಿತಿ ಪಡೆಯುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

27/02/2026 5:57 AM
State News
KARNATAKA

ರಾಜ್ಯದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ `ಉಪನ್ಯಾಸಕರ ಹುದ್ದೆಗೆ ಬಡ್ತಿ’ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ !

By kannadanewsnow5727/02/2026 6:21 AM KARNATAKA 1 Min Read

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಹುದ್ದೆಯಿಂದ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಲು ನಡೆಸಲಾಗುತ್ತಿರುವ…

ರೈತರೇ ಗಮನಿಸಿ : ಪಿಎಂ-ಕಿಸಾನ್ ಪ್ರೋತ್ಸಾಹಧನ ಪಡೆಯಲು ತಪ್ಪದೇ ಈ ಕೆಲಸ ಮಾಡಿ !

27/02/2026 6:11 AM

ರಾಜ್ಯ ಸರ್ಕಾರದಿಂದ `SC-ST’ ಸಮುದಾಯವರಿಗೆ ಗುಡ್ ನ್ಯೂಸ್ : ಕುರಿ-ಮೇಕೆ ಘಟಕ ಸ್ಥಾಪನೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

27/02/2026 6:08 AM

BIG NEWS : `RTI’ ಅಡಿ ಪತ್ನಿ/ಪತಿ ಐಟಿ ರಿಟರ್ನ್ಸ್ ಮಾಹಿತಿ ಪಡೆಯುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

27/02/2026 5:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.