ಬೆಂಗಳೂರು: ಹನಿಟ್ರ್ಯಾಪ್ ಯತ್ನ ಆರೋಪ ಸಂಬಂಧ ಇಂದು ಸಂಜೆ 4.30ಕ್ಕೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರನ್ನು ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರು ತಿಳಿಸಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಇಂದು ಸಂಜೆ 4.30ಕ್ಕೆ ಭೇಟಿಯಾಗುವಂತೆ ಸಮಯ ನೀಡಿದ್ದಾರೆ. ಅವರನ್ನು ಭೇಟಿಯಾಗಿ ಹನಿಟ್ರ್ಯಾಪ್ ಯತ್ನ ಆರೋಪದ ಬಗ್ಗೆ ಚರ್ಚಿಸುವುದಾಗಿ ತಿಳಿಸಿದರು.
ಇಂದು ಸಂಜೆ 4.30ಕ್ಕೆ ಸದಾಶಿವನಗರದಲ್ಲಿರುವಂತ ಗೃಹ ಸಚಿವರ ನಿವಾಸದಲ್ಲಿ ಅವರನ್ನು ಭೇಟಿಯಾಗಿ ಚರ್ಚಿಸಿ, ದೂರು ನೀಡುತ್ತೇನೆ. ಆ ಬಳಿಕ ದೂರಿನ ಪ್ರತಿಯನ್ನು ಮಾಧ್ಯಮಗಳಿಗೆ ನೀಡುವುದಾಗಿ ಹೇಳಿದರು.
ಹನಿಟ್ರ್ಯಾಪ್ ಯತ್ನ ಆರೋಪ ಸಂಬಂಧ ನನಗೆ ಯಾವುದೇ ರೀತಿಯ ಒತ್ತಡ ಇಲ್ಲ. ಒತ್ತಡ ಹೇರುವ ಪ್ರಯತ್ನವೂ ಆಗಿಲ್ಲ. ನನ್ನ ತಪ್ಪಿದೆ ಅನ್ನಿಸುತ್ತೆ ಎಂದರು.
ಸದನದಲ್ಲಿ ವಿಷಯ ಪ್ರಸ್ತಾಪಿಸಿದ ಬಳಿಕ ನಾನು ಬ್ಯುಸಿಯಾಗಿದ್ದೆ. ಬಿಡುವಿಲ್ಲದ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದೆ. ಹೀಗಾಗಿ ಗೃಹ ಸಚಿವರನ್ನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಇಂದು ಸಂಜೆ ಭೇಟಿಯಾಗಿ ದೂರು ನೀಡುವುದಾಗಿ ತಿಳಿಸಿದರು.
BIG NEWS: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ: ಬಸವರಾಜ ಹೊರಟ್ಟಿ ಸ್ಪಷ್ಟನೆ