ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಅವರು ಜೈಲಿನಲ್ಲಿ ಬಿಂದಾಸ್ ಆಗಿದ್ದಾರೆ, ಎನ್ನುವ ಫೋಟೋ ನಿನ್ನೆ ವೈರಲಾಗಿತ್ತು. ಅದಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಇಂದು 7 ಜೈಲು ಅಧಿಕಾರಿಗಳನ್ನು ಅಮಾನತು ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಸ್ವತಃ ಪರಮೇಶ್ವರ್ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದಾರೆ.
ಹೌದು ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಅವರು ನಿನ್ನೆ ರೌಡಿಶೀಟರ್ ಗಳಾದ ವಿಲ್ಸನ್ ಗಾರ್ಡನ್ ನಾಗ, ರೇಣುಕಾ ಸ್ವಾಮಿ ಕೊಲೆ ಪ್ರಕರಣದ 11ನೇ ಆರೋಪಿ ಹಾಗೂ ನಟ ದರ್ಶನ್ ಅವರ ಮ್ಯಾನೇಜರ್ ಆದಂತಹ ನಾಗರಾಜ್ ಮತ್ತು ಇನ್ನೊಬ್ಬ ರೌಡಿಶೀಟರ್ ಆದ ಕುಳ್ಳ ಸೀನನ ಜೊತೆ ಕುಳಿತುಕೊಂಡು ಒಂದು ಕೈಯಲ್ಲಿ ಕಾಫಿ ಕುಡಿಯುತ್ತ, ಮತ್ತೊಂದು ಕೈಯಲ್ಲಿ ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್ ಆಗಿ ಭಾರಿ ಸಂಚಲನ ಸೃಷ್ಟಸಿದೆ.
ಅದಾದ ಬಳಿಕ ನಟ ದರ್ಶನ ಅವರು ಜೈಲಿನಲ್ಲಿ ಇದ್ದಂತಹ ಮತ್ತೊಬ್ಬ ರೌಡಿ ಧರ್ಮ ಎನ್ನುವವನ ತಮ್ಮ ಸತ್ಯ ಎನ್ನುವ ಜೊತೆಗೆ ವಿಡಿಯೋ ಕಾಲಲ್ಲಿ ಮಾತನಾಡಿದ್ದಾರೆ ಎನ್ನುವ ವಿಡಿಯೋ ಕೂಡ ನಿನ್ನೆ ವೈರಲಾಗಿತ್ತು. ಇವೆಲ್ಲ ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರವರು 7 ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದರು.
ಇದಾದ ಬಳಿಕ ಸದ್ಯ ಗೃಹ ಸಚಿವ ಜಿ ಪರಮೇಶ್ವರ್ ಅವರು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದಾರೆ. ಗೃಹ ಸಚಿವ ಜಿ ಪರಮೇಶ್ವರ್ ಅವರಿಗೆ ಐಜಿಪಿ ಅಲೋಕ್ ಮೋಹನ್, ಕಾರಾಗೃಹ ಇಲಾಖೆ ಡಿಜಿ ಮಾಲಿನಿ ಕೃಷ್ಣಮೂರ್ತಿ ಸೇರಿದಂತೆ ಎಲ್ಲಾ ಅಧಿಕಾರಿಗಳು ಸಾಥ್ ನೀಡಿದರು.